Friday, June 21, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಹೆಚ್.ಡಿ.ಕುಮಾರಸ್ವಾಮಿ ಬೆಂಬಲಿಸಿ ಪಕ್ಷ ಬಲಪಡಿಸಿ: ರಾಮಚಂದ್ರು

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಜೆಡಿಎಸ್ ಪಕ್ಷ ಬಲಪಡಿಸಬೇಕೆಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರ ಮನವಿ ಮಾಡಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಎನ್.ಡಿ.ಎ.ಮೈತ್ರಿ ಕೂಟದ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿರವರ ಪರವಾಗಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಮಂಡ್ಯ ನಗರದ ಒಂದನೇ ವಾರ್ಡಿನ ಕಾಳಿಕಾಂಭ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಿವಿಧ ವಾರ್ಡ್‌ಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.

ಎರಡು ಬಾರಿ ಮುಖ್ಯಮಂತ್ರಿಯಾಗಿ ರೈತರ ಸಾಲಮನ್ನಾ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿ ಮಾಡಿದ್ದ ಎಚ್.ಡಿ.ಕುಮಾರ ಸ್ವಾಮಿ ಅವರಿಗೆ ಜಿಲ್ಲೆಯ ಮತದಾರರು ಅತಿ ಹೆಚ್ಚು ಮತಗಳನ್ನು ನೀಡುವ ಮೂಲಕ ಸಂಸದರಾಗಿ ಆಯ್ಕೆ ಮಾಡಬೇಕು.ಕುಮಾರಸ್ವಾಮಿ ಅವರ ಗೆಲುವು ನಿಶ್ಚಿತವಾಗಿದ್ದು, ಕೇಂದ್ರ ಸಚಿವರಾಗಿ ಕುಮಾರಸ್ವಾಮಿ ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುವುದು ಖಚಿತ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್,ಬಿಜೆಪಿ ಮುಖಂಡ ಅಶೋಕ್ ಜಯರಾಮ್,ಮನ್ ಮುಲ್ ಉಪಾಧ್ಯಕ್ಷ ಎಂ.ಎಸ್. ರಘುನಂದನ್, ಪಿಇಟಿ ಅಧ್ಯಕ್ಷ ವಿಜಯಾನಂದ್, ಜೆಡಿಎಸ್ ತಾಲೂಕು ಅಧ್ಯಕ್ಷ ಬೂದನೂರು ಸ್ವಾಮಿ, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ,ನಗರಸಭೆ ಸದಸ್ಯರಾದ ನಾಗೇಶ್, ಮೀನಾಕ್ಷಿ ಪುಟ್ಟಸ್ವಾಮಿ,ನಗರಸಭೆ ಮಾಜಿ ಸದಸ್ಯ ಬೋರೇಗೌಡ,ಬಿಜೆಪಿ ನಗರ ಘಟಕ ಅಧ್ಯಕ್ಷ ವಸಂತಕುಮಾರ್, ನವನೀತ್ ಕೃಷ್ಣ ಮತ್ತಿತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!