Thursday, September 19, 2024

ಪ್ರಾಯೋಗಿಕ ಆವೃತ್ತಿ

ಬುಲ್ಡೋಜರ್​​ ಕಾರ್ಯಾಚರಣೆಗೆ ಬ್ರೇಕ್ ಹಾಕಿದ ಸುಪ್ರೀಂ ಕೋರ್ಟ್‌

“ಬುಲ್ಡೋಜರ್ ನ್ಯಾಯ”ವನ್ನು ಸ್ಥಗಿತಗೊಳಿಸಿದ ನ್ಯಾಯಾಲಯ ಒಂದು ವೇಳೆ ಅಕ್ರಮ ಧ್ವಂಸ ಪ್ರಕರಣವಿದ್ದರೂ ಅದು ಸಂವಿಧಾನದ ನೀತಿಗೆ ವಿರುದ್ಧವಾಗಿದೆ ಹಾಗಾಗಿ ಕೋರ್ಟ್ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ಬುಲ್ಡೋಜರ್​​ ಕಾರ್ಯಾಚರಣೆ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು,‌ ಅಕ್ಟೋಬರ್ 1ರವರೆಗೆ ದೇಶಾದ್ಯಂತ ಯಾವುದೇ ಕಾರ್ಯಾಚರಣೆ ನಡೆಸದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೆ ರಸ್ತೆಗಳು, ಬೀದಿಗಳು, ಫುಟ್‌ಪಾತ್‌ಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾದ ಅಕ್ರಮ ನಿರ್ಮಾಣಗಳನ್ನು ಸರಿಯಾದ ಕ್ರಮದಲ್ಲಿ ನೆಲಸಮ ಮಾಡಲು ಅನುಮತಿಸಲಾಗುವುದು ಎಂದು ಹೇಳಿದೆ.

ನೋಟಿಸ್ ನಂತರವೇ ಅತಿಕ್ರಮಣ ತೆರೆವುಗೊಳಿಸಲು ಬುಲ್ಡೋಜರ್‌ಗಳನ್ನು ಬಳಸಲಾಗುತ್ತಿದೆ ಎಂದು ಸಾಲಿಸಿಟರ್ ಜನರಲ್ ಹೇಳಿದರು. ಈ ಕುರಿತು ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು, ದೇಶಾದ್ಯಂತ ಒಂದೇ ಒಂದು ಕಟ್ಟಡ ಧ್ವಂಸ ಮಾಡಿದರೂ ಸಂವಿಧಾನದ ಆಶಯಕ್ಕೆ ಧಕ್ಕೆ ಉಂಟಾಗುತ್ತದೆ. ನಮ್ಮ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾದದ್ದು ನಡೆಯುತ್ತದೆ ಎಂದು ಬುಲ್ಡೋಜರ್ ಕಾರ್ಯಾಚರಣೆ ಬಗ್ಗೆ ಅಭಿಪ್ರಾಯಪಟ್ಟಿದೆ.

ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಬುಲ್ಡೋಜರ್‌ಗಳ ಧ್ವಂಸ ಕ್ರಮದ ವಿರುದ್ಧ ಜಮಿಯತ್ ಉಲೇಮಾ-ಎ-ಹಿಂದ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಈ ಆದೇಶ ನೀಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!