Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕೆ.ಆರ್.ಎಸ್ ಪಕ್ಷದಿಂದ ಲಂಚಮುಕ್ತ ಅಭಿಯಾನ

ಕೆ ಆರ್ ಎಸ್ ಪಕ್ಷದ ತಂಡವು ಮಂಡ್ಯದಲ್ಲಿ ಲಂಚಮುಕ್ತ ಅಭಿಯಾನವನ್ನು ನಡೆಸಿತು. ಜಾಥದ ಮೂಲಕ ಜಿಲ್ಲಾಧಿಕಾರಿ ಕಚೇರಿಯನ್ನು ತಲುಪಿ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಮನವಿ ಸಲ್ಲಿಸಿತು.

ಬಹುತೇಕ ಸರ್ಕಾರಿ ನೌಕರರು, ಸಿಬ್ಬಂದಿಗಳು ಸಹ ಗುರುತಿನ ಚೀಟಿಯನ್ನು ಧರಿಸಿದೆ ಇರುವುದನ್ನು ಗಮನಕ್ಕೆ ತರಲಾಯಿತು.

ಕೆ ಆರ್ ಎಸ್ ಪಕ್ಷಕ್ಕೆ ಜಿಲ್ಲೆಯ ತಾಲ್ಲೂಕುಗಳಿಂದ ಬಂದಿರುವ ದೂರುಗಳನ್ವಯ, ಅಹವಾಲುಗಳ ಪಟ್ಟಿಯನ್ನ ಹಾಗೂ ಕೆಲವು ಬೇಡಿಕೆಗಳನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿ ಆದಷ್ಟು ಬೇಗ ಪರಿಹಾರವನ್ನು ಕೊಡಿಸಬೇಕಾಗಿ ಮನವಿ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧ್ಯಕ್ಷ ಡಿ.ಜಿ. ನಾಗರಾಜ್ ಮಾತನಾಡಿ, ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದ್ದು, ನಮ್ಮ ಮಂಡ್ಯ ಜಿಲ್ಲೆಗೆ ಕರ್ನಾಟಕದ್ಯಂತ ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ ಸಾಹಿತ್ಯಾಸಕ್ತರಿಗೆ, ಪ್ರತಿನಿಧಿಗಳಿಗೆ, ಕನ್ನಡ ಪ್ರೇಮಿಗಳಿಗೆ ಯಾವುದೇ ರೀತಿಯ ಕುಂದು ಕೊರತೆಯಾಗದಂತೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವ್ಯವಸ್ಥಿತವಾಗಿ ನಿರ್ವಹಿಸಿ ಯಶಸ್ವಿಯಾಗಿ ನಡೆಯಲು ಸೂಕ್ತ ಕ್ರಮಗಳನ್ನು ‌ಜರುಗಿಸಬೇಕಾಗಿ ಮನವಿ ಮಾಡಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ವಣೆಯ ಕೆಲಸಗಳಿಗೆ ಅಗತ್ಯವಿದ್ದರೆ ಪಕ್ಷದ ಜಿಲ್ಲಾ ಹಾಗೂ ಎಲ್ಲಾ ತಾಲೂಕು ಪದಾಧಿಕಾರಿಗಳು ಸ್ವಯಂಸೇವಕರಾಗಿ ಕೆಲಸ ಮಾಡಲು ಸಿದ್ಧರಿರುವ ವಿಚಾರವನ್ನು ತಿಳಿಸಲಾಯಿತು ಹಾಗೂ ಸಾಹಿತ್ಯ ಸಮ್ಮೇಳನ ನಡೆಯುವಂತಹ ಸಂದರ್ಭದಲ್ಲಿ ಅವ್ಯವಸ್ಥೆಗಳು ಕಂಡುಬಂದಲ್ಲಿ ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ತಂಡಗಳ ಗಮನಕ್ಕೆ ತರಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೆ.ಆರ್.ಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ ಹೆಬ್ಬಕವಾಡಿ, ಪ್ರಧಾನ ಕಾರ್ಯದರ್ಶಿ ಚಂದ್ರು ಕೀಲಾರ, ಜಿಲ್ಲಾ ಕಾರ್ಯದರ್ಶಿಗಳಾದ ಯೋಗಿಶ್ ಎಚ್. ಈ. , ಶಶಿಧರ್ ವೈ.ಕೆ, ನಂದೀಶ್ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ