Friday, September 20, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಮಾ.12ಕ್ಕೆ ಬುದ್ದ ಪ್ರತಿಮೆ ಅನಾವರಣದ ಮೊದಲ ವಾರ್ಷಿಕೋತ್ಸವ

ನವೋದಯ ಸಾಮಾಜಿಕ ಸೇವಾ ಟ್ರಸ್ಟ್ ವತಿಯಿಂದ 21 ಅಡಿ ಭಗವಾನ್ ಬುದ್ದರ ಪುತ್ಥಳಿ ಅನಾವರಣದ ಮೊದಲನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಮಾ. 12ರಂದು ಮದ್ಯಾಹ್ನ 2ಗಂಟೆಗೆ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಮಿಲಿಂದ ಬುದ್ದ ವಿಹಾರದ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪರಿಷತ್ ಮಾಜಿ ಸದಸ್ಯ ಜಯರಾಜು ತಿಳಿಸಿದರು.

ಮಳವಳ್ಳಿ ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ವಿಚಾರ ವೇದಿಕೆ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಬಾಚನಹಳ್ಳಿಯಲ್ಲಿ ಮಿಲಿಂದ ಬುದ್ದ ವಿಹಾರದಲ್ಲಿ ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್‌ರವರ ಆಶಯದಂತೆ ಬೌದ್ದ ಧಮ್ಮ ಸ್ಥಾಪನೆಗಾಗಿ ೨೧ ಅಡಿ ಎತ್ತರದ ಭಗವಾನ್‌ಬುದ್ದರ ಪುತ್ಥಳಿ ನಿರ್ಮಾಣವಾಗಿ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೌದ್ದಮಹಾಸಭಾ, ನವೋದಯ ಟ್ರಸ್ಟ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರದಲ್ಲಿ ಮೊದಲನೇ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಬುದ್ದರ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದರು.

ಬೌದ್ದಮಹಾಸಭಾ ತಾಲ್ಲೂಕು ಅಧ್ಯಕ್ಷ ಮಾರ್ಕಾಲು ನಟರಾಜು ಮಾತನಾಡಿ, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕೊಳ್ಳೇಗಾಲ ಚೇತನವನದ ಮನೋರಖ್ಖಿತ ಭಂತೇಜಿ, ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ, ಅಕ್ಕಾ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ. ಶಿವಕುಮಾರ್, ಕನಕಪುರ ಧಮ್ಮದೀವಿಗೆ ಅಧ್ಯಕ್ಷ ಮಲ್ಲಿಕಾರ್ಜುನ್, ಭಾರತೀಯ ಬೌದ್ದ ಮಹಸಭಾ ಯೂತ್‌ವಿಂಗ್ ರಾಜ್ಯಾಧ್ಯಕ್ಷ ದರ್ಶನ್ ಸೋಮಶೇಖರ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ, ಕಾರ್ಯಕ್ರಮಕ್ಕೆ ಡಾ. ಬಿ.ಆರ್ ಅಂಬೇಡ್ಕರ್ ಅನುಯಾಯಿಗಳು ಸೇರಿದಂತೆ ಪ್ರತಿಯೊಬ್ಬರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಮುಖಂಡರಾದ ಯತೀಶ್, ಮಹದೇವು, ಶಿವನಂಜು, ಬೆಳಕವಾಡಿ ಕಾಂತರಾಜು, ಪ್ರಸಾದ್, ಸಿದ್ದರಾಮು, ಚೇತನ್‌ಕುಮಾರ್, ಉಪ್ಪಿ, ಮುದ್ದುರಾಜ್, ಸುರೇಶ್, ಮಹದೇವಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!