Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಕಲ್ಕುಣಿಯಲ್ಲಿ ಬೌದ್ಧ- ಅಂಬೇಡ್ಕರ್ ಮಹಾದ್ವಾರ ಲೋಕಾರ್ಪಣೆ

ಮಳವಳ್ಳಿ ತಾಲ್ಲೂಕಿನ‌ ಕಲ್ಕುಣಿ ಗ್ರಾಮದಲ್ಲಿ ಜ 12 ರಂದು ಡಾ. ಬಿ.ಆರ್ ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಬೌದ್ಧ ಅಂಬೇಡ್ಕರ್ ಮಹಾದ್ವಾರ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾ.ಪಂ ಮಾಜಿ ಸದಸ್ಯಕಲ್ಕುಣಿ ಚಂದ್ರು ತಿಳಿಸಿದರು.

ಮಳವಳ್ಳಿ ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜ 12 ರಂದು ಭಗವಾನ್ ಬುದ್ಧ, ಅಂಬೇಡ್ಕರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಉದ್ಘಾಟಿಸಲಿದ್ದು, ಶಾಸಕ ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲಾ ಸಮುದಾಯದ ‌ಜನರು ಆಗಮಿಸಿ ಕಾರ್ಯಕ್ರಮವನ್ನುಯಶ್ವಸಿಗೊಳಿಸಬೇಕು ಎಂದು ಮನವಿಕೊಂಡರು.

ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯ ಸಿದ್ದರಾಜು, ನಂಜುಂಡಸ್ವಾಮಿ ಕಲ್ಕುಣಿ, ಚಿನ್ನಸ್ವಾಮಿ, ಮಲ್ಲಣ್ಣ, ಗ್ರಾ.ಪಂ ಸದಸ್ಯ ಮಲ್ಲೇಶ್, ವಿಜಯಪ್ರಕಾಶ್, ಶ್ರೀನಿವಾಸ್, ಪ್ರಕಾಶ್, ಜಿ.ಪಂ ಮಾಜಿ ಸದಸ್ಯ ಜಯರಾಜು ಸೇರಿದಂತೆ ಹಲವರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ