Friday, September 20, 2024

ಪ್ರಾಯೋಗಿಕ ಆವೃತ್ತಿ

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್  

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್‌ ಪಾಸ್ ಸೌಲಭ್ಯವನ್ನು ಕಲ್ಪಿಸಿದೆ.
ನೋಂದಾಯಿತ ಕಟ್ಟಡ ಕಾರ್ಮಿಕರು ಕರ್ನಾಟಕ ಒನ್, ” ಗ್ರಾಮ-1 ಅಥವಾ ಕರ್ನಾಟಕ -1 ಸೇವಾ ಕೇಂದ್ರಗಳ ಮೂಲಕ ಪಾಸ್ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಮಾದರಿಯಲ್ಲಿ ಬಸ್ ಪಾಸ್ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕರಿಗೆ ಮಾತ್ರ ಬಸ್ ಪಾಸ್ ವಿತರಿಸಲಾಗುತ್ತದೆ. ಯಾವ ಜಿಲ್ಲೆಯಲ್ಲಿ ನೋಂದಣಿಯಾಗಿದ್ದರೂ ಸಹ ಪಾಸಿನಲ್ಲಿ ನಮೂದಿಸಲಾಗಿರುವ ಪ್ರಾರಂಭಿಕ ಸ್ಥಳದಿಂದ 7 ಹಂತಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಇಲಾಖೆಯ ಉಚಿತ ಸಹಾಯವಾಣಿ ಸಂಖ್ಯೆ 155214 ಅನ್ನು ಸಂಪರ್ಕಿಸಬಹುದೆಂದು ಮಂಡ್ಯ ವಿಭಾಗದ ಕ.ರಾ.ರ.ಸಾ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!