Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಧ್ಯಪ್ರದೇಶ| 4ನೇ ತರಗತಿಯ ವಿದ್ಯಾರ್ಥಿಗೆ 108 ಬಾರಿ ಕೈವಾರದಿಂದ ಚುಚ್ಚಿ ಹಿಂಸಿಸಿದ ಸಹಪಾಠಿಗಳು !

ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಕೈವಾರದ ಮೂಲಕ 108 ಬಾರಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಪೊಲೀಸರಿಂದ ತನಿಖಾ ವರದಿ ಕೇಳಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಡಬ್ಲ್ಯೂಸಿ ಅಧ್ಯಕ್ಷೆ ಪಲ್ಲವಿ ಪೋರ್ವಾಲ್, ನವೆಂಬರ್ 24 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ ಜಗಳದಲ್ಲಿ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿಗಳು ಜ್ಯಾಮಿತಿಯ ಕೈವಾರದಿಂದ 108 ಬಾರಿ ಹಲ್ಲೆ ನಡೆಸಿದ್ದಾರೆ. ಇದೊಂದು ಆಘಾತಕಾರಿ ಪ್ರಕರಣವಾಗಿದ್ದು, ಚಿಕ್ಕ ವಯಸ್ಸಿನ ಮಕ್ಕಳ ಹಿಂಸಾತ್ಮಕ ವರ್ತನೆಗೆ ಕಾರಣವನ್ನು ಕಂಡುಹಿಡಿಯಲು ನಾವು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದ್ದೇವೆ” ಎಂದು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಿಡಬ್ಲ್ಯೂಸಿ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಲಹೆ ನೀಡಲಿದೆ ಮತ್ತು ಮಕ್ಕಳು ಹಿಂಸಾತ್ಮಕ ದೃಶ್ಯಗಳನ್ನು ಒಳಗೊಂಡಿರುವ ವಿಡಿಯೋ ಗೇಮ್‌ಗಳನ್ನು ಆಡುತ್ತಾರೆಯೇ ಎಂದು ಪರಿಶೀಲಿಸಲಿದೆ ಎಂದು ಪೋರ್ವಾಲ್ ಹೇಳಿದರು.

ನವೆಂಬರ್ 24 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಾಲೆಯಲ್ಲಿ ನಡೆದ ದಾಳಿಯಲ್ಲಿ ಬಾಲಕನಿಗೆ ಗಾಯದ ಗುರುತುಗಳಿವೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

“ನನ್ನ ಮಗ ಮನೆಗೆ ಹಿಂದಿರುಗಿದ ನಂತರ ಘಟನೆಯ ಬಗ್ಗೆ ವಿವರಿಸಿದ್ದಾನೆ. ಅವನ ಸಹಪಾಠಿಗಳು ಏಕೆ ಹಿಂಸಾತ್ಮಕವಾಗಿ ನಡೆಸಿಕೊಂಡರು ಎಂದು ನನಗೆ ಇನ್ನೂ ತಿಳಿದಿಲ್ಲ. ಶಾಲಾ ಆಡಳಿತ ಮಂಡಳಿಯು ತರಗತಿಯ ಸಿಸಿಟಿವಿ ದೃಶ್ಯಗಳನ್ನು ನನಗೆ ನೀಡುತ್ತಿಲ್ಲ. ಪ್ರಕರಣದ ಬಗ್ಗೆ ಏರೋಡ್ರೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ” ಎಂದು ತಿಳಿಸಿದರು.

ದೂರು ನೀಡಿದ ನಂತರ ಸಂತ್ರಸ್ತ ವಿದ್ಯಾರ್ಥಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲ ಮಕ್ಕಳು 10 ವರ್ಷದೊಳಗಿನವರಾಗಿದ್ದು, ಕಾನೂನು ನಿಬಂಧನೆಗಳ ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ಸಿಂಗ್ ಚೌಹಾಣ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!