Saturday, May 18, 2024

ಪ್ರಾಯೋಗಿಕ ಆವೃತ್ತಿ

ಹೂತಗೆರೆಯಲ್ಲಿ ನಡೆದ ರಾಗಿ ಬೆಳೆ ಕ್ಷೇತ್ರೋತ್ಸವ

2022 23ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ರಾಗಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ  ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಹೂತಗೆರೆ ಗ್ರಾಮದಲ್ಲಿ ನಡೆಯಿತು.

ರಾಗಿ ಬೆಳೆ ಪ್ರಾತ್ಯಕ್ಷಿಕೆ ತಾಂತ್ರಿಕತೆಗಳ ಬಗ್ಗೆ, ರೈತರು ದಿನನಿತ್ಯದ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಹಾಯಕ ಕೃಷಿ ನಿರ್ದೇಶಕ ಪರಮೇಶ್ ವಿವರಿಸಿದರು. ಬೆಳೆ ವಿಮೆ, ಬೆಳೆ ಪರಿಹಾರ ಹಾಗೂ ಕೃಷಿ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಮುಖಂಡ ಜನಾರ್ದನ್ ಹೂತಗೆರೆ ಮಾತನಾಡಿ, ಕಾಡು ಪ್ರಾಣಿಗಳಿಂದ ಬೆಳೆಗಳ ಮೇಲೆ ಆಗುತ್ತಿರುವ ಹಾನಿಯ ಬಗ್ಗೆ ರೈತರಿಗೆ ಮಾಹಿತಿ ನೀಡಿ. ಗ್ರಾಮ ಪಂಚಾಯಿತಿ ಕಚೇರಿಗೆ ಅಂತಹ ಪ್ರಕರಣಗಳ ಬಗ್ಗೆ ಮಾಹಿತಿ ನೀಡಲು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ಅಧಿಕಾರಿ ಸಿ.ಪಿ.ರಾಮೇಗೌಡ, ಸಹಾಯಕ ತಾಂತ್ರಿಕ ವ್ಯವಸ್ಥಾಪಕ ವಿಜಯ್ ಕುಮಾರ್, ಮುಖಂಡರಾದ ಪುಟ್ಟಲಿಂಗಣ್ಣ, ತಮ್ಮಯ್ಯಣ್ಣ, ಶ್ರೀಧರ್ ಸೇರಿದಂತೆ ಹೂತಗೆರೆ ಗ್ರಾಮಸ್ಥರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!