Friday, November 20, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ಸರಣಿ ಅಪಘಾತಕ್ಕೀಡಾಗಿ ಹೆದ್ದಾರಿಯಲ್ಲೇ ಹೊತ್ತಿ ಉರಿದ ಕಾರು !

ಶ್ರೀರಂಗಪಟ್ಟಣ ಸಮೀಪದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ ಹಲವು ಕಾರುಗಳು ನಜ್ಜು ಗುಜ್ಜಾಗಿ ಕಾರೊಂದು ಹೊತ್ತಿ ಉರಿದ ಘಟನೆ ಇಂದು ನಡೆದಿದೆ.

ಶ್ರೀರಂಗಪಟ್ಟಣದ ಬಳಿಯ ಟಿ.ಎಂ.ಹೊಸೂರು ಗೇಟ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು ನಾಲ್ಕು ಕಾರುಗಳು ಜಖಂ ಗೊಂಡಿವೆ, ಅಪಘಾತದ ರಭಸಕ್ಕೆ  ಹೆದ್ದಾರಿಯಲ್ಲೇ ಕಾರೊಂದು ಧಗ ಧಗಿಸಿ ಉರಿದು, ಸಂಪೂರ್ಣ ಭಸ್ಮವಾಗಿದೆ.

ಬೆಂಗಳೂರು ಕಡೆಯಿಂದ ಮೈಸೂರು ಕಡೆ ತೆರಳುವಾಗ ಹೆದ್ದಾರಿಯಲ್ಲಿ ಅತೀ ವೇಗವಾಗಿ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮುಂಬದಿ ಸಂಚರಿಸುತ್ತಿದ್ದ ನಾಲ್ಕು ಕಾರುಗಳು ಜಖಂಗೊಂಡಿವೆ ಎಂದು ತಿಳಿದು ಬಂದಿದೆ.

ಕಾರಿನಲ್ಲಿ ಇದ್ದವರನ್ನು ಸ್ಥಳೀಯರು ನಾಗರಿಕರು ಹಾಗೂ ಪೋಲೀಸರು ರಕ್ಷಣೆ ಮಾಡಿದ್ದು,‌ ಕಾರಿಗೆ ಬೆಂಕಿ ಹೊತ್ತಿಕೊಳ್ಳುವ ವೇಳೆ ಕಿಟಕಿ ಗ್ಲಾಸ್ ಹೊಡೆದು ಸುಟ್ಟು ಹೋದ ಕಾರಿನಲ್ಲಿದ್ದವರನ್ನು ಸಹ ರಕ್ಷಿಸಲಾಗಿದೆ.

ಶ್ರೀರಂಗಪಟ್ಟಣ ಕಡೆಗೆ ತೆರಳುತ್ತಿದ್ದ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್.ಯತೀಶ್ ಅವರ ಕಾರು ಸಹ ಜಖಂಗೊಂಡಿದ್ದು, ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ