ನಾಗಮಂಗಲ ತಾಲ್ಲೂಕಿನ ಹೊಣಕೆರೆ ಹೋಬಳಿಯ ಬ್ರಹ್ಮದೇವರಹಳ್ಳಿ ಗ್ರಾಮದ ಶ್ರೀ ರಮಾನಂದನಾಥ ಸ್ವಾಮೀಜಿ ಸರ್ಕಾರಿ ಪ್ರೌಢಶಾಲೆಗೆ ಇಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರು ಶಾಲೆಯ ಅಭಿವೃದ್ಧಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಕ್ರೀಡಾ ಸಾಮಾಗ್ರಿಗಳು ಮತ್ತು ಪುಸ್ತಕಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿದರು. ಗ್ರಂಥಾಲಯ, ಕ್ರೀಡಾಂಗಣ ಶಾಲಾ ಕೊಠಡಿಗಳು , ಶೌಚಾಲಯಗಳನ್ನು ಪರಿಶೀಲನೆ ಮಾಡಿದರು.ಶಾಲಾ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು,ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತೆ ಸಲಹೆ ನೀಡಿದರು.

ಬೊಮ್ಮನಹಳ್ಳಿ ಸರ್ಕಾರಿ ಪ್ರಾಥಮಿಕ ಹಾಗೂ ಕೆಂಬಾರೆ ಪ್ರೌಢಶಾಲೆಗಳನ್ನು ಭೇಟಿ ನೀಡಿ ಪರಿಶೀಲನೆ ನಡೆಸಿ ಶಾಲೆಯಲ್ಲಿ ಮಕ್ಕಳೊಂದಿಗೆ ಚರ್ಚೆ ನಡೆಸಿ. ಮಕ್ಕಳು ಶಾಲಾ ಚಟುವಟಿಕೆಗಳಲ್ಲಿ ಚುರುಕಾಗಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ನಂದೀಶ್,
ಆದಿಚುಂಚನಗಿರಿ ವಿಶ್ವವಿದ್ಯಾಲಯದ ಕುಲಪತಿ ಶೇಖರ್, ಆದಿಚುಂಚನಗಿರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ನರೇಂದ್ರ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.




