Thursday, September 19, 2024

ಪ್ರಾಯೋಗಿಕ ಆವೃತ್ತಿ

ಜಿಲ್ಲಾಡಳಿತದಿಂದ ಪವಿತ್ರ ಮೃತ್ತಿಕೆಗೆ ಪೂಜೆ

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರ ಕಂಚಿನ ಪ್ರತಿಮೆ ಅನಾವರಣ ಹಾಗೂ ಥೀಮ್ ಪಾರ್ಕ್ ಗೆ ಕಳೆದ 10 ದಿನಗಳಿಂದ ಜಿಲ್ಲೆಯ ಗ್ರಾಮ ಪಂಚಾಯತಿ ಹಾಗೂ ವಾರ್ಡ್ಗಳಿಂದ ಪವಿತ್ರ ಮೃತ್ತಿಕೆ ಸಂಗ್ರಹಣೆ ಮಾಡಲಾಗಿದ್ದು, ಪವಿತ್ರ ಮೃತ್ತಿಗೆಗೆ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಪೂಜೆ ಸಲ್ಲಿಸಿದರು.

ಪವಿತ್ರ ಮೃತ್ತಿಗೆಗೆ ಇಂದು ‌ಶಿವಪುರದ ಸತ್ಯಾಗ್ರಹ ಸೌಧದಲ್ಲಿ‌ ವಿಜೃಂಭಣೆಯಿಂದ ಪೂಜೆ ಸಲ್ಲಿಸಿ, ಬೆಂಗಳೂರಿನ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ‌ಶಾಂತ ಎಲ್. ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್ ನಾಗರಾಜು, ಉಪವಿಭಾಗಾಧಿಕಾರಿ ಕೀರ್ತನ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಂಜೀವಪ್ಪ ಸೇರಿದಂತೆ ಇನ್ನಿತರ ‌ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!