Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಕಾಂಗ್ರೆಸ್ ನಾಯಕರಿಂದ ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿ

ಮಂಡ್ಯ ವಿಧಾನಸಭಾ ಕ್ಷೇತ್ರದ ಬಿ.ಫಾರಂ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಕಾಂಗ್ರೆಸ್ ನಾಯಕರು ನಾಳೆ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಿದ್ದಾರೆಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

ಇಂದು ಬೆಳಿಗ್ಗೆ ಮಂಡ್ಯದ ಸುಭಾಷ್ ನಗರದಲ್ಲಿರುವ ಮಾಜಿ ಸಚಿವ ಎಂ.ಎಸ್.ಆತ್ಮಾನಂದರವರ ನಿವಾಸದಲ್ಲಿ ಸಭೆ ಸೇರಿದ ಮಂಡ್ಯ ಕ್ಷೇತ್ರದ ಬಿ.ಫಾರಂ ಆಕಾಂಕ್ಷಿತರಾದ ಅಮರಾವತಿ ಚಂದ್ರಶೇಖರ್, ಮಾಜಿ ಶಾಸಕ ಎಚ್.ಬಿ.ರಾಮು, ಬಿ.ಸಿ.ಶಿವಾನಂದ, ಹಾಲಹಳ್ಳಿ ರಾಮಲಿಂಗಯ್ಯ, ಎಂ‌.ಎಸ್‌. ಚಿದಂಬರ್, ಹೊಸಹಳ್ಳಿ ಶಿವಲಿಂಗೇಗೌಡ ಚರ್ಚೆ ನಡೆಸಿದರು.

ಸಭೆಯಲ್ಲಿ ಕಷ್ಟಕಾಲದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಾಪಾಡಿದವರಿಗೆ ಮಂಡ್ಯ ಕ್ಷೇತ್ರದ ಬಿ.ಫಾರಂ ನೀಡಬೇಕೆಂದು ಮಲ್ಲಿಕಾರ್ಜುನ ಖರ್ಗೆಯವರನ್ನು ಒತ್ತಾಯಿಸಲು ಕೈ ನಾಯಕರು ನಿರ್ಧರಿಸಿದ್ದಾರೆ.

ನಾಳೆ ಬೆಳಿಗ್ಗೆ ಕಾಂಗ್ರೆಸ್ ಮುಖಂಡರ ನಿಯೋಗ ನವದೆಹಲಿಗೆ ತೆರಳಲ್ಲಿದ್ದು ಅಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಂಡ್ಯ ವಿಧಾನಸಭಾ ಕ್ಷೇತ್ರದ ಬಿ.ಫಾರಂ ವಿಚಾರವಾಗಿ
ಚರ್ಚೆ ನಡೆಸಲಿದ್ದು, ಸಂಕಷ್ಟ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಜೊತೆಗಿರುವವರನ್ನು ಪರಿಗಣಿಸಿ ಎಂದು ಮನವಿ ಮಾಡಲಿದೆ ಎಂದು ತಿಳಿದುಬಂದಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ