ಮಂಡ್ಯ ಜಿಲ್ಲಾ ಕೃಷಿಕ ಸಮಾಜದ 2025-26 ರಿಂದ 2029-30ನೇ ಸಾಲಿನ 5 ವರ್ಷ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಮತ್ತು ರಾಜ್ಯ ಪ್ರತಿನಿಧಿಗಳ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಈ ಕೆಳಕಂಡವರು ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷರಾಗಿ ಸಿ.ಎಂ.ನಾಗರಾಜು ಚಾಮಲಾಪುರ, ಉಪಾಧ್ಯಕ್ಷರಾಗಿ ಜಿ.ಧನಂಜಯದರಸಗುಪ್ಪೆ ಶ್ರೀರಂಗಪಟ್ಟಣ, ಪ್ರಧಾನ ಕಾರ್ಯದರ್ಶಿಯಾಗಿ ಜಿ.ಡಿ. ಚಂದ್ರಶೇಖರ್ ಮದ್ದೂರು, ಖಜಾಂಜಿಯಾಗಿ ಬಿ.ಎಂ.ಪ್ರಕಾಶ್ ಮಳವಳ್ಳಿ , ರಾಜ್ಯ ಪ್ರತಿನಿಧಿಯಾಗಿ ಎಸ್.ಆರ್.ಮಂಜುನಾಥ್ ಗೌಡ ನಾಗಮಂಗಲ ಅವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಜಂಟಿ ಕೃಷಿ ನಿರ್ದೇಶಕ ಅಶೋಕ್ ಕಾರ್ಯನಿರ್ವಹಿಸಿದರು.
ಮಂಡ್ಯ ಜಿಲ್ಲಾ ಕೃಷಿಕ ಸಮಾಜದ ನೂತನ ರಾಜ್ಯ ಪ್ರತಿನಿಧಿ ಹಾಗೂ ಹಾಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಎಸ್.ಆರ್. ಮಂಜುನಾಥ್ ಗೌಡ ಮಾತನಾಡಿ, ಮಂಡ್ಯ ಜಿಲ್ಲೆಯ ಕೃಷಿಕ ಸಮಾಜದ ಎಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಹಾಗೂ ಇಲಾಖೆ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಕೃಷಿ ಮಂತ್ರಿ ಎನ್. ಚಲುವರಾಯಸ್ವಾಮಿ ಅವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇನ್ನು ಮುಂದೆಯೂ ಅವರ ಮಾರ್ಗದರ್ಶನದಂತೆಯೇ ಜಿಲ್ಲೆಯಾದ್ಯಂತ ಕೃಷಿ ಭವನಗಳಿಗೆ ನಿವೇಶನ ಹಾಗೂ ಕಟ್ಟಡ ನಿರ್ಮಾಣ ಮಾಡಲು ಶ್ರಮಿಸುವುದಾಗಿ ತಿಳಿಸಿದರು.
ನೂತನ ಜಿಲ್ಲಾಧ್ಯಕ್ಷ ಸಿ.ಎಂ.ನಾಗರಾಜು ಚಾಮಲಾಪುರ ಮಾತನಾಡಿ, ಮಂಡ್ಯ ಜಿಲ್ಲಾ ಕೇಂದ್ರ ಸ್ಥಾನದಲ್ಲಿರುವ ಕಟ್ಟಡದ ನಿವೇಶನ ಸಮಾಜದ ಹೆಸರಿಗೆ ನೋಂದಣಿ ಮಾಡಿಸಿಕೊಂಡು, ಕಟ್ಟಡ ನಿರ್ಮಾಣ ಮಾಡುವುದು ಪ್ರಥಮ ಆದ್ಯತೆಯಾಗಿದೆ ಎಂದರು.
ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ನಿರ್ದೇಶಕರು ಹಾಗೂ ಬೆಂಬಲಿಗರು ಅಭಿನಂದಿಸಿ ಸನ್ಮಾನಿಸಿದರು.




