Friday, November 20, 2026

ಪ್ರಾಯೋಗಿಕ ಆವೃತ್ತಿ

ಈ ಬಾರಿಯು ಮಂಗಳವಾರವೇ ನಾಮಪತ್ರ ಸಲ್ಲಿಸಲಿರುವ ಸಿ.ಎಸ್.ಪುಟ್ಟರಾಜು

ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ಅವರು ಏ.18ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಬಿಜೆಪಿ ಸಂಭಾವ್ಯ ಅಭ್ಯರ್ಥಿ ಡಾ.ಎನ್.ಎಸ್.ಇಂದ್ರೇಶ್ ಅವರು ಏ.17ರಂದು ಸೋಮವಾರ ನಾಮಪತ್ರ ಸಲ್ಲಿಸಲು ಸಿದ್ದತೆ ಮಾಡಿಕೊಳ್ಳಲಿದ್ದಾರೆ.

ಶಾಸಕ ಸಿ.ಎಸ್.ಪುಟ್ಟರಾಜು ಅವರು ಪ್ರತಿ ಚುನಾವಣೆಯಲ್ಲಿ ಮಂಗಳವಾರ ದಿನದಂದೇ ನಾಮಪತ್ರ ಸಲ್ಲಿಸಿರುವುದು ವಿಶೇಷವಾಗಿದೆ. ಮಂಗಳವಾರ ನಾಮಪತ್ರ ಸಲ್ಲಿಸಿದರೆ ಶುಭವಾಗಲಿದೆ ಎಂಬುದು ನಂಬಿಕೆಯಾಗಿದೆ. ನಾಮಪತ್ರ ಸಲ್ಲಿಕೆ ದಿನದಂದು ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಶಕ್ತಿ ಪ್ರದರ್ಶನ ಪ್ರದರ್ಶಿಸಲಿದ್ದಾರೆ. ಜೆಡಿಎಸ್ ಪಕ್ಷಕ್ಕೆ ತನ್ನದೇ ಆದ ಕಾರ್ಯಕರ್ತರ ಶಕ್ತಿ ಇದೆ.

ಆದರೆ ಬಿಜೆಪಿ ಪಕ್ಷದಲ್ಲಿ ಡಾ.ಇಂದ್ರೇಶ್ ಅವರು ಸ್ವತಃ ಪ್ರವಾಸ ಕೈಗೊಂಡು ಸಂಘಟನೆ ಮಾಡಿ, ದೊಡ್ಡ ಕಾರ್ಯಕರ್ತರ ಪಡೆಯನ್ನು ರಚಿಸಿ, ಇದೇ ಪ್ರಥಮ ಬಾರಿಗೆ ಸಾವಿರಾರು ಸಂಖ್ಯೆಯಲ್ಲಿ ಸೇರಿಸುವ ಗುರಿ ಇಟ್ಟುಕೊಂಡಿದ್ದಾರೆ. ಬಿಜೆಪಿ ಶಕ್ತಿ ಪ್ರದರ್ಶನಗೊಂಡ ನಂತರ ಕ್ಷೇತ್ರದಲ್ಲಿ ಬಿಜೆಪಿ ಬಗ್ಗೆ ರಾಜಕೀಯ ಚರ್ಚೆ ನಡೆಯುವುದು ಖಚಿತ ಎಂದು ತಿಳಿದು ಬಂದಿದೆ.

ಬಿಜೆಪಿ ಪಕ್ಷದಿಂದ ಅಧಿಕೃತವಾಗಿ ಡಾ.ಎನ್.ಎಸ್.ಇಂದ್ರೇಶ್ ಅವರಿಗೆ ಟಿಕೆಟ್ ಖಚಿತವಾಗಿದೆ. ಬಿಜೆಪಿ ಹೈಕಮಾಂಡ್ ಘೋಷಣೆಯೊಂದೇ ಬಾಕಿ ಇದೆ ಎಂದು ಮಾಹಿತಿ ಲಭ್ಯವಾಗಿದೆ.

ರೈತಸಂಘ, ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರು, ಯಾವ ದಿನ ನಾಮಪತ್ರ ಸಲ್ಲಿಸಲು ಶೀಘ್ರದಲ್ಲೇ ‌ನಿರ್ಧಾರ ಮಾಡಲಿದ್ದಾರೆ ಎಂದು ಗೊತ್ತಾಗಿದೆ. ಪಾಂಡವಪುರ ಪಟ್ಟಣದ ತಾಲೂಕು ಆಡಳಿತ ಸೌಧದ ನಂ.2ರ ಕೊಠಡಿಯಲ್ಲಿ ಚುನಾವಣೆ ಅಧಿಕಾರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ