Thursday, September 19, 2024

ಪ್ರಾಯೋಗಿಕ ಆವೃತ್ತಿ

ಗ್ಯಾರೆಂಟಿ ಯೋಜನೆಗಳಿಗೆ ಸಚಿವ ಸಂಪುಟದಲ್ಲಿ ತಾತ್ವಿಕ ಅನುಮೋದನೆ

“ಅನ್ನಭಾಗ್ಯ” ಯೋಜನೆಯಡಿ ರಾಜ್ಯದ ಬಡ ಕುಟುಂಬದ ಪ್ರತಿ ವ್ಯಕ್ತಿಗೆ ಮಾಸಿಕ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ.

“>

“ಗೃಹಜ್ಯೋತಿ” ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡಲು,  ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲು ಕೂಡ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ.

nudikarnataka.com

ಕೇಂದ್ರ ಸರ್ಕಾರದಿಂದ ಬರಬೇಕಾದ ಜಿಎಸ್’ಟಿ ಮೊತ್ತವನ್ನು ಪಡೆಯುವಲ್ಲಿ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಫಲರಾಗಿದ್ದಾರೆ, ಆದರೂ ನಾವು ರಾಜ್ಯದ ಜನತೆ ಭರವಸೆ ನೀಡಿದ್ದಂತೆ ಎಲ್ಲಾ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸುತ್ತೇವೆ, ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!