ಚುನಾವಣಾ ಆಯೋಗದ ಮತಗಳ್ಳತನದ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಅಭೂತಪೂರ್ವ ಜನ ಬೆಂಬಲ ವ್ಯಕ್ತವಾಗಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.
ಒಂದೇ ದಿನದಲ್ಲಿ 15 ಲಕ್ಷಕ್ಕೂ ಅಧಿಕ ಜನರು ವೆಬ್ ಲಿಂಕ್ ಮೂಲಕ ಪ್ರಮಾಣ ಪತ್ರ ಪಡೆದಿದ್ದು, 10 ಲಕ್ಷಕ್ಕೂ ಹೆಚ್ಚು ಜನರು ಮಿಸ್ಡ್ ಕಾಲ್ ನೀಡಿದ್ದಾರೆ. ದೇಶಾದ್ಯಂತ 25 ಲಕ್ಷಕ್ಕೂ ಹೆಚ್ಚು ಜನ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಯ ಹೋರಾಟದಲ್ಲಿ ದೇಶದ ಜನರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭಾ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ ‘ಎಕ್ಸ್; ನಲ್ಲಿ ಬರೆದುಕೊಂಡಿದೆ.




