Friday, November 20, 2026

ಪ್ರಾಯೋಗಿಕ ಆವೃತ್ತಿ

ಅಭ್ಯರ್ಥಿ ಗೆಲುವಿಗೆ ‘ಕೈ’ ಪಡೆ ಒಂದಾಗಬೇಕು: ಡಿ.ಕೆ‌.ಶಿವಕುಮಾರ್

ಕಾಂಗ್ರೆಸ್ ಪಕ್ಷ ಯಾರನ್ನು ಅಭ್ಯರ್ಥಿ ಮಾಡುತ್ತದೋ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ಸೂಚಿಸಿದರು.

ಮೈಸೂರಿನ ಜಲದರ್ಶಿನಿಯಲ್ಲಿ ಮಂಡ್ಯ, ಕೆ.ಆರ್.ಪೇಟೆ ಹಾಗೂ ಮೇಲುಕೋಟೆ ವಿಧಾನಸಭಾ ಕ್ಷೇತ್ರಗಳ ಆಕ್ಷಾಂಕ್ಷಿತರ ಸಭೆ ಮಂಗಳವಾರ ರಾತ್ರಿ ನಡೆಯಿತು ನಡೆಯಿತು.

ಸಭೆಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಈ ಬಾರಿ ಅಧಿಕಾರಕ್ಕೆ ಬರುವ ಉತ್ತಮ ವಾತಾವರಣವಿದೆ. ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಒಂದುಗೂಡಿ ಚುನಾವಣೆಯಲ್ಲಿ ಕೆಲಸ ಮಾಡಬೇಕಾದುದು ಅನಿವಾರ್ಯವಾಗಿದೆ. ಒಂದು ವಿಧಾನಸಭಾ ಕ್ಷೇತ್ರದಲ್ಲಿ ಒಬ್ಬರಿಗೆ ಬಿ.ಫಾರಂ ಕೊಡಲು ಸಾಧ್ಯ. ಇದನ್ನು ಪ್ರತಿಯೊಬ್ಬ ಆಕಾಂಕ್ಷಿತರು ಅರಿತು ಸಾಮೂಹಿಕವಾಗಿ ಚುನಾವಣೆಯಲ್ಲಿ ಕೆಲಸ ಮಾಡುವ ಮೂಲಕ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರಣರಾಗಬೇಕು.ಪಕ್ಷ ಅಧಿಕಾರಕ್ಕೆ ಬಂದ ನಂತರ ನಿಮ್ಮ ಸೇವೆಗೆ ಸೂಕ್ತ ಸ್ಥಾನಮಾನ ನೀಡಹಲವು ಎಂದರು.

ಮಂಡ್ಯ ಕ್ಷೇತ್ರದ ಆಕಾಂಕ್ಷಿತರಾದ ರವಿಕುಮಾರ್ ಗಣಿಗ, ಡಾ.ಹೆಚ್.ಕೃಷ್ಣ, ಕೀಲಾರ ರಾಧಾಕೃಷ್ಣ, ಯು.ಸಿ.ಶಿವಕುಮಾರ್ (ಶಿವಪ್ಪ), ಸಿದ್ಧಾರೂಢ ಸತೀಶ್‌ಗೌಡ, ಎಂ.ಎಸ್.ಆತ್ಮಾನಂದ, ಎಚ್.ಪಿ.ರಾಮು, ಅಮರಾವತಿ ಚಂದ್ರಶೇಖರ್ ಅಂಜನಾ ಶ್ರೀಕಾಂತ್ ಎಂ.ಎಸ್.ಚಿದಂಬರ್ ಶಿವಲಿಂಗೇಗೌಡ , ಹಾಲಹಳ್ಳಿ ರಾಮಲಿಂಗಯ್ಯ ಸೇರಿದಂತೆ 16 ಮಂದಿ ಆಕಾಂಕ್ಷಿತರು ಸಭೆಯಲ್ಲಿ ಭಾಗವಹಿಸಿದ್ದರು.

ಮೇಲುಕೋಟೆ ಕ್ಷೇತ್ರದ ಆನಂದ್‌ಕುಮಾರ್ ಮತ್ತು ತ್ಯಾಗರಾಜು ಹಾಗೂ ಕೆ.ಆರ್.ಪೇಟೆ ಕ್ಷೇತ್ರದ ಕೆ.ಬಿ.ಚಂದ್ರಶೇಖರ್ ವಿಜಯ್‌ರಾಮೇಗೌಡ, ಕೃಷ್ಣಮೂರ್ತಿ, ಕಿಕ್ಕೇರಿ ಸುರೇಶ್, ನಾಗೇಂದ್ರ ಸಭೆಯಲ್ಲಿ ಭಾಗಿಯಾಗಿದ್ದರು.

ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಹೆಚ್ಚು ಮಂದಿ ಆಕಾಂಕ್ಷಿತರಿದ್ದು, ಒಬ್ಬರಿಗೆ ಅವಕಾಶ ಕಲ್ಪಿಸಲು ಸಾಧ್ಯ. ಎಲ್ಲರೂ ಒಟ್ಟಾಗಿ ಪಕ್ಷದ ಅಭ್ಯರ್ಥಿ ಪರವಾಗಿ ಕಾರ್ಯನಿರ್ವಹಿಸಿದರೆ ಗೆಲುವು ಗಳಿಸಲು ಸಾಧ್ಯ. ಇದನ್ನು ಮನಗಂಡು ಒಟ್ಟಾಗಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿದರು.

ಕೆ.ಆರ್.ಪೇಟೆ ಕ್ಷೇತ್ರದ 6 ಮಂದಿ ಆಕಾಂಕ್ಷಿತರು ಪಕ್ಷದ ಬಲವರ್ಧನೆಗೆ ಮುಂದಾಗಬೇಕು. ಸಚಿವ ಕೆ.ಸಿ.ನಾರಾಯಣಗೌಡ ಪಕ್ಷಕ್ಕೆ ಬರಲು ಮುಂದಾಗಿದ್ದಾರೆ. ನಿಮ್ಮ ಒಗ್ಗಟ್ಟಿನ ಕಾರ್ಯನಿರ್ವಹಣೆಯಿಂದ ಅವರಿಗೆ ಆಸ್ಪದ ನೀಡಿಲ್ಲ. ಎಲ್ಲರೂ ಒಟ್ಟಾಗಿ ಅಭ್ಯರ್ಥಿ ಗೆಲುವಿಗೆ ಕಾರ್ಯನಿರ್ವಹಿಸಬೇಕೆಂದರು.

ಮಾರ್ಚ್ 12ರಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕೇಂದ್ರ ಸ್ಥಾನ ಪಾಂಡವಪುರದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸಲು ಸ್ಥಳೀಯ ಮುಖಂಡರು ಹೊಣೆಗಾರಿಕೆ ಹೊರಬೇಕು. ಪಕ್ಷವನ್ನು ಬಲಪಡಿಸಲು ಕಾರ್ಯತಂತ್ರ ರೂಪಿಸಬೇಕು. ಅಭ್ಯರ್ಥಿಯ ಆಯ್ಕೆ ವಿಚಾರ ಅಥವಾ ಬೆಂಬಲಿಸುವ ವಿಚಾರವಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದೆಂದು ಡಿಕೆಶಿ ಅಭಯ ನೀಡಿದರು.

ಒಟ್ಟಾರೆ ಸಭೆಯಲ್ಲಿ ಪಾಲ್ಗೊಂಡಿದ್ದ ಹಲವು ಮುಖಂಡರು ಹಲವು ವರ್ಷಗಳಿಂದ ಪಕ್ಷ ಸೇವೆ ಹಾಗೂ ಸಂಘಟನೆಯಲ್ಲಿ ತೊಡಗಿರುವ ಹಿರಿಯರಿಗೆ ಮಣೆ ಹಾಕುವಂತೆ ಮನವಿ ಮಾಡಿದ್ದಾರೆನ್ನಲಾಗಿದೆ. ಇದಕ್ಕೆ ಅಧ್ಯಕ್ಷರು ಸಮ್ಮತಿ ಸೂಚಿಸಿದರು.

ಸಭೆಯಲ್ಲಿ ಎಐಸಿಸಿ ವೀಕ್ಷಕ ರೋಜಿಜಾನ್, ಎಐಸಿಸಿ ಸದಸ್ಯ ಎನ್.ಚಲುವರಾಯಸ್ವಾಮಿ, ವಿಧಾನಸಭಾ ಸದಸ್ಯರಾದ ದಿನೇಶ್‌ಗೂಳಿಗೌಡ, ಮಧುಮಾದೇಗೌಡ, ಪಕ್ಷದ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಇತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ