Thursday, September 19, 2024

ಪ್ರಾಯೋಗಿಕ ಆವೃತ್ತಿ

ರೈತರಿಂದ ಮೇಣದ ಬತ್ತಿ ಹಚ್ಚಿ ವಿನೂತನ ಪ್ರತಿಭಟನೆ

ಪ್ರತಿ ಟನ್ ಕಬ್ಬಿಗೆ 4.500 ರೂ. ದರ ನಿಗದಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕರ್ನಾಟಕ ರಾಜ್ಯ ರೈತಸಂಘ ನಡೆಸುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಕಾರ್ಯಕರ್ತರು ಮೇಣದ ಬತ್ತಿ ಹಚ್ಚಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ಅವರ ನೇತೃತ್ವದಲ್ಲಿ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರು, ಕಬ್ಬಿನ ಬೆಲೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತಿಗೆ ತಪ್ಪಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಬೇಕೇ ಬೇಕು ನ್ಯಾಯ ಬೇಕು,ಟನ್ ಕಬ್ಬಿಗೆ 4500 ರೂ.ನಿಗದಿ ಮಾಡದ ಸರ್ಕಾರಕ್ಕೆ ಧಿಕ್ಕಾರ,ರೈತರ ಬೇಡಿಕೆಗಳನ್ನು ಈಡೇರಿಸಲು ಆಗದ ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಲಿ ಎಂದು ಕಿಡಿಕಾರಿದರು.

ರೈತ ನಾಯಕರಾದ ಮಧುಚಂದನ್, ಪ್ರಸನ್ನಗೌಡ ಸೇರಿದಂತೆ ಹಲವರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!