Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಹದೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದವರಿಗೆ ಕಾರು ಡಿಕ್ಕಿ; ಇಬ್ಬರು ಗಾಯ

ಕಾರು – ಬೈಕ್ ಮುಖಾಮುಖಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಹೊಸಹಳ್ಳಿ ಕ್ರಾಸ್ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ.

ಗುತ್ತಲು ಗ್ರಾಮದ ನಿವಾಸಿ ಚಂದನ್ (28), ಗಾಣಿಗಪುರ ಗ್ರಾಮದ ನಿವಾಸಿ ದರ್ಶನ್(28) ಗಾಯಾಳು.

ಬೈಕ್ ನಲ್ಲಿ ಮಹದೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣ 108 ಅಂಬುಲೆನ್ಸ್’ ಮೂಲಕ ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆ ಮಂಡ್ಯ ಜಿಲ್ಲಾಸ್ವತ್ರೆಗೆ ದಾಖಲಿಸಲಾಗಿದೆ‌

ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ