Wednesday, November 18, 2026

ಪ್ರಾಯೋಗಿಕ ಆವೃತ್ತಿ

ಕಾರು ಡಿಕ್ಕಿ‌ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಮಂಡ್ಯ ತಾಲ್ಲೂಕಿನ ತೂಬಿನಕೆರೆ ಬಳಿ ಕಾರು ಡಿಕ್ಕಿ‌ ಹೊಡೆದು ಸ್ಕೂಟರ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ‌ ಜರುಗಿದೆ.

ನೊದೆಕೊಪ್ಪಲು ಗ್ರಾಮದ 65 ವರ್ಷದ ಚಿಕ್ಕೀರೆಗೌಡ ಮೃತಪಟ್ಟ ವ್ಯಕ್ತಿ. ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಗ್ರಾಮದಿಂದ ತೂಬಿನಕೆರೆ ಗ್ರಾಮದ ಬ್ಯಾಂಕ್’ಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲೇ ತೀವ್ರ ಗಾಯಗೊಂಡು ವ್ಯಕ್ತಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಆಗಮಿಸಿ ದೂರು ದಾಖಲಿಸಿಕೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ