ಮದ್ದೂರು ತಾಲೂಕಿನ ನಿಡಘಟ್ಟ ಬಳಿ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ರೀತಿಯ ಸೋವು ನೋವು ಸಂಭವಿಸಿಲ್ಲ.
ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗ್ರಾಮದ ರಂಜಿತಾ ಎಂಬುವರು ಬೆಂಗಳೂರಿನ ತಾಯಿ ಮನೆಗೆ ಕಾರಿನಲ್ಲಿ ಹೋಗಿ ಗುರುವಾರ ಸಂಜೆ 5 ಗಂಟೆಗೆ ಸುಮಾರಿಗೆ ವಾಪಸ್ ಶ್ರೀರಂಗಪಟ್ಟಣಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಇದ್ದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ.
ಈ ವೇಳೆ ಕಾರಿನ ಚಾಲಕ ಕಿರಣ್ ಅವರು ತಕ್ಷಣ ಕಾರಿನಿಂದ ಇಳಿದು ರಂಜಿತಾ ಅವರನ್ನು ಕಾರಿನಿಂದ ಕೆಳಗಿಳಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯಿಂದ ಆವೃತ್ತವಾಗಿದ್ದ ಕಾರನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಸಂಚಾರ ಪಿಎಸ್ಐ ರಂಗಸ್ವಾಮಿ ಸ್ಥಳಕ್ಕೆ ಆಗವಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.




