ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನ ಸಿಬ್ಬಂದಿಯವರಿಗೆ ರೂ. 5 ಲಕ್ಷದವರೆವಿಗೆ ಕ್ಯಾಶ್‌ಲೆಸ್ ಚಿಕಿತ್ಸೆ ವ್ಯವಸ್ಥೆ ಜಾರಿಗೆ ತಂದಿರುವುದನ್ನು ಕರ್ನಾಟಕ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹಾಲಿಂಗೇಗೌಡ ಮುದ್ದನಘಟ್ಟ ಸ್ವಾಗತಿಸಿದ್ದಾರೆ.
ಸಾಮಾಜಿಕ ಕಳಕಳಿ ಮತ್ತು ಹೊರಗುತ್ತಿಗೆ ನೌಕರರ ಕಲ್ಯಾಣಕ್ಕಾಗಿ ಕೈಗೊಂಡಿರುವ ಉಪಕ್ರಮ ನೀತಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರನ್ನು ಸಂಘವು ಎಲ್ಲಾ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿಯವರ ಮತ್ತು ಹೊರಗುತ್ತಿಗೆ/ಸಂಸ್ಥೆ/ಏಜೆನ್ಸಿ/ ಗುತ್ತಿಗೆದಾರರ/ ಮಾಲೀಕರುಗಳ ಪರವಾಗಿ ಹೃದಯ ಪೂರ್ವಕವಾಗಿ ಅಭಿನಂದಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




