Thursday, September 19, 2024

ಪ್ರಾಯೋಗಿಕ ಆವೃತ್ತಿ

ನ.​ 24ರೊಳಗೆ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಸುತ್ತೇನೆ: ಜಯಪ್ರಕಾಶ್​ ಹೆಗ್ಡೆ

ಕಾಂತರಾಜು ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯನ್ನು ನವೆಂಬರ್ 24ರೊಳಗೆ ಸರ್ಕಾರಕ್ಕೆ ಸಲ್ಲಿಕೆ ಮಾಡುತ್ತೇನೆ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ತಿಳಿಸಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಜಾತಿಗಣತಿ ವರದಿ ಸ್ವೀಕರಿಸಿ ತಿರಸ್ಕರಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಒಕ್ಕಲಿಗ ಸಮುದಾಯದ ನಾಯಕರು ತೀರ್ಮಾನಿಸಿದ್ದಾರೆ.

ಈ ಬಗ್ಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಅವರು ಮಾಧ್ಯಮದವರ ಜೊತೆ ಮಾತನಾಡಿ, ”ಶ್ರೀಗಳು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಈಶ್ವರಪ್ಪ ಸಹ ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

”ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮರು ಪರಿಶೀಲನೆ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ವರದಿ ಸರಿ ಇಲ್ಲ ಎಂದು ಯಾವ ಆಧಾರದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ನವೆಂಬರ್​ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಜಾತಿಗಣತಿ ವಿಚಾರವಾಗಿ ಮಾತನಾಡಿದ್ದ ಸಚಿವ ಕೆಎಸ್ ಈಶ್ವರಪ್ಪ, ”ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು ಎಂದು ಹೇಳಿದ್ದರು. ಅಲ್ಲದೇ ಮಾಜಿ ಸಚಿವ ಕೆ.ಗೋಪಾಲಯ್ಯ, ಕಾಂತರಾಜ್ ವರದಿಯಿಂದ ಒಕ್ಕಲಿಗರಿಗೆ ನಷ್ಟವಾಗಲಿದೆ ಎಂದಿದ್ದರು.

ರಾಜ್ಯ ರಾಜಕಾರಣದಲ್ಲಿ ಜಾತಿ ಗಣತಿ ವರದಿ ಭಾರೀ ಸದ್ದು ಮಾಡುತ್ತಿದ್ದು, ಸರ್ಕಾರಕ್ಕೆ ವರದಿ ಸಲ್ಲಿಕೆಯಾದ ಬಳಿಕ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!