Saturday, October 19, 2024

ಪ್ರಾಯೋಗಿಕ ಆವೃತ್ತಿ

ಬೆಂಗಳೂರಿಗೆ ಕಾವೇರಿ| 5ನೇ ಹಂತದ ಯೋಜನೆಗೆ ಅ.16ರಂದು ಸಿಎಂ ಚಾಲನೆ

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ. ಕೆ. ಹಳ್ಳಿ ) ಯಲ್ಲಿ ಅಕ್ಟೋಬರ್ 16 ರ ಬುಧವಾರ ದಂದು ಬೆಳಿಗ್ಗೆ 10.30 ಗಂಟೆಗೆ ಕಾವೇರಿ ಐದನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಸಮಾರಂಭವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಲೋಕಾರ್ಪಣೆ ಮಾಡಲಿದ್ದಾರೆ.

ಮನೆ ಮನೆಗೂ ಕಾವೇರಿ ನೀರು ಇದು ಸಮೃದ್ಧ ಬೆಂಗಳೂರು

50 ಲಕ್ಷ ಫಲಾನುಭವಿಗಳು,
4 ಲಕ್ಷ ಸಂಪರ್ಕ
4336 ಕೋಟಿ ರೂ. ವೆಚ್ಚ
775 ಎಂ. ಎಲ್. ಡಿ ಹೆಚ್ಚುವರಿ ನೀರು ಪೂರೈಕೆ,

(ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಸರಬರಾಜು, ಯಲಹಂಕ, ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಬೊಮ್ಮನಹಳ್ಳಿ ವಲಯದ ಮನೆ ಮನೆಗೂ ಕಾವೇರಿ ನೀರು ಪೂರೈಕೆ)

 

ವಿಶೇಷ ಆಹ್ವಾನಿತರಾಗಿ ಕೇಂದ್ರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯಾವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್. ಡಿ.ಕುಮಾರಸ್ವಾಮಿ, ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಭಾಗವಹಿಸಲಿದ್ದಾರೆ. ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ

ಮುಖ್ಯ ಅತಿಥಿಗಳಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಸಾರಿಗೆ ಮತ್ತು ಮುಜರಾಯಿ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ. ಜಾರ್ಜ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ವಸತಿ ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು, ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವರು ಸುರೇಶ್ ಬಿ.ಎಸ್.(ಭೈರತಿ ) ಹಾಗೂ ಇನ್ನಿತರ ಸಚಿವರು ,ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!