Thursday, November 19, 2026

ಪ್ರಾಯೋಗಿಕ ಆವೃತ್ತಿ

ಕಾವೇರಿ ಸಂಕಷ್ಟ| ತಮಿಳುನಾಡಿಗೆ 15 ದಿನಗಳ ಕಾಲ 5,000 ಕ್ಯೂಸೆಕ್ಸ್ ನೀರು ಬಿಡಲು ಆದೇಶ

ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸೂಚನೆ ನೀಡಿದೆ. ಮುಂದಿನ 15 ದಿನ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚಿಸಿದೆ. ಪ್ರಸ್ತುತ ಕರ್ನಾಟಕ ತಮಿಳುನಾಡಿಗೆ 1900 ಕ್ಯೂಸೆಕ್‌ ನೀರು ಹರಿಸುತ್ತಿದೆ. ಆದ್ರೆ, ಇದೀಗ ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯು ಹೆಚ್ಚುವರಿಯಾಗಿ 3,100 ಕ್ಯೂಸೆಕ್ಸ್​ ನೀರು ಹರಿಸಬೇಕೆಂದು ಕರ್ನಾಟಕಕ್ಕೆ  ತಿಳಿಸಿದೆ.

ಬಿಳಿಗುಂಡ್ಳು ಮಾಪನ ಕೇಂದ್ರದಲ್ಲಿ 5,000 ಕ್ಯೂಸೆಕ್ ದಾಖಲಾಗಬೇಕು. ಹೀಗಾಗಿ ಹೆಚ್ಚುವರಿಯಾಗಿ 3,100 ಕ್ಯೂಸೆಕ್ ನೀರು ಹರಿಸಬೇಕಾದ ಅನಿವಾರ್ಯತೆ ಎಂದಿದೆ. ಕಳೆದ ಬಾರಿ 15 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ಹೇಳಿತ್ತು.

ಸೋಮವಾರ ವರ್ಚುವಲ್ ಮೂಲಕ ಕಾವೇರಿ ನೀರು ನಿರ್ವಹಣ ಸಭೆ ನಡೆಸಲಾಯ್ತು. ಕರ್ನಾಟಕ, ತಮಿಳುನಾಡು ಅಧಿಕಾರಿಗಳು ಮತ್ತು ಕೇಂದ್ರ ಜಲ ಆಯೋಗದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾದ್ದರು. ಎರಡು ರಾಜ್ಯಗಳ ಜಲಾಶಯಗಳ ನೀರಿನ ಸಂಗ್ರಹ, ಮಳೆಯ ಪ್ರಮಾಣದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.  ಎರಡು ರಾಜ್ಯಗಳ ವಾಸ್ತವ ಪರಿಸ್ಥಿತಿ‌ ಲೆಕ್ಕಾಹಾಕಿ ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣ ಸಮಿತಿ ಸೂಚನೆ ನೀಡಿದೆ.‌

ಮತ್ತೊಂದು ಅವಕಾಶವಿದೆ 

ಇಂದು ಕಾವೇರಿ ನೀರು ನಿರ್ವಹಣ ಸಮಿತಿ ನೀಡಿರುವ ಸೂಚನೆಯನ್ನು ಮಾರ್ಪಾಡು ಮಾಡಲು ಮತ್ತೊಂದು ಅವಕಾಶವಿದೆ. ನಾಳೆ ಅತಿ ಮುಖ್ಯವಾದ ಕಾವೇರಿ ನೀರು ನಿರ್ವಹಣ ಪ್ರಾಧಿಕಾರದ ಸಭೆ ದೆಹಲಿಯಲ್ಲಿ ನಡೆಯಲಿದೆ. ಆ ಸಭೆಯಲ್ಲಿ ತಮಿಳುನಾಡಿಗೆ ಹರಿಸಬೇಕಾದ ನೀರಿನ ಪ್ರಮಾಣವನ್ನು ತಗ್ಗಿಸಲು ಅವಕಾಶವಿದೆ. ಕಳೆದ ಬಾರಿ CWRC 15 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿತ್ತು. ಆದ್ರೆ CWRC ನೀಡಿದ್ದ ಸೂಚನೆಯನ್ನು ಬದಿಗಿರಿಸಿ CWMA 10 ಸಾವಿರಕ್ಕೆ ಇಳಿಸಿತ್ತು.‌ ಹಾಗಾಗಿ ಕರ್ನಾಟಕಕ್ಕೆ‌ ಮತ್ತೊಂದು ಅವಕಾಶವಿದೆ. ನಾಳೆ (ಆಗಸ್ಟ್ 29) ನವದೆಹಲಿಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆ ನಡೆಯಲಿದ್ದು, ನೀರು ಬಿಡುವ ಸೂಚನೆ ಬಗ್ಗೆ ಚರ್ಚೆಗೆ ನಡೆಯಲಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ