Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| 72ನೇ ದಿನಕ್ಕೆ ಕಾವೇರಿ ಹೋರಾಟ: ಸರ್ಕಾರದ ವಿರುದ್ದ ಆಕ್ರೋಶ

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಮತ್ತೆ ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯದ ಹಿತ ಕಾಪಾಡದ ಕೇಂದ್ರ – ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಿರಂತರ ಧರಣಿ 72ನೇ ದಿನ ತಲುಪಿದ್ದು, ಹಲವರು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಸರ್ಕಾರ ಕಾವೇರಿ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ, ಸಂಕಷ್ಟಕಾಲದಲ್ಲಿ ಮತ್ತೆ ಮತ್ತೆ ನೆರೆ ರಾಜ್ಯಕ್ಕೆ ನೀರು ಬಿಡುವಂತೆ ಆದೇಶ ಹೊರ ಬೀಳುತ್ತಿರುವುದು ಸರ್ಕಾರದ ವೈಫಲ್ಯತೆಯನ್ನು ತೋರ್ಪಡಿಸಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಮಧ್ಯಪ್ರವೇಶಿಸಬೇಕಾದ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮುಂದುವರೆಸಿರುವುದು ಕನ್ನಡಿಗರಿಗೆ ಮಾಡುತ್ತಿರುವ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ನಾರಾಯಣ್ ಮಾತನಾಡಿ, ಕಾವೇರಿ ನದಿ ನೀರಿನ ವಿಚಾರದಲ್ಲಿ ನಿರಂತರ ಅನ್ಯಾಯಕೊಳಗಾಗಿರುವ ಕರ್ನಾಟಕಕ್ಕೆ ನ.19ರಂದು ನಡೆಯುವ ಪ್ರಾಧಿಕಾರದ ಸಭೆಯಲ್ಲಿ ನ್ಯಾಯ ದೊರಕಲಿದೆ ಎಂಬ ಆಶಾಭಾವನೆ ಇದೆ, ಅಷ್ಟರ ಮಟ್ಟಿಗೆ ನಿರೀಕ್ಷೆ ಇಟ್ಟುಕೊಂಡಿದ್ದೇವೆ, ನ್ಯಾಯ ದೊರೆತರೆ ಮುಂದಿನ ಸಂಕಷ್ಟದ ಹೊರೆ ತಪ್ಪಲಿದೆ ಇಲ್ಲವಾದರೆ ಸರ್ಕಾರದ ಮೇಲೆ ಒತ್ತಡ ತರಲು ಹೋರಾಟ ಮುಂದುವರೆದಿದೆ ಎಂದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ ಬೋರಯ್ಯ ಮಾತನಾಡಿ, ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಕಷ್ಟಕಾಲದಲ್ಲಿಯೂ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ, ಬೆಳೆಗೆ ನೀರಿಲ್ಲ ಜನ ಜಾನುವಾರುಗಳಿಗೆ ಕುಡಿಯಲು ನೀರು ಉಳಿಯಲಿ ಎಂದು ಹೋರಾಟ ಮಾಡುತ್ತಿದ್ದೇವೆ ಎಂದರು.

ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಮ್, ಮಲ್ಲನಾಯಕನ ಕಟ್ಟೆ ಬೋರೇಗೌಡ, ರೈತ ಸಂಘದ ಇಂಡುವಾಳು ಚಂದ್ರಶೇಖರ್. ಮುದ್ದೇಗೌಡ, ಕೃಷ್ಣಪ್ರಕಾಶ್, ಕನ್ನಡ ಸೇನೆ ಮಂಜುನಾಥ್, ದಸಂಸ ಎಂ ವಿ ಕೃಷ್ಣ, ನಿವೃತ್ತ ಇಂಜಿನಿಯರಿಂಗ್ ಸಂಘದ ದೇವರಾಜು, ಫಯಾಜ್ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!