Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಬಸರಾಳು, ದೇವಲಾಪುರ ಹೋಬಳಿಗೆ ಕಾವೇರಿ ಹರಿಸಲು ₹1,000 ಕೋಟಿ ರೂ.ಗಳ ಯೋಜನೆ : ರವಿಕುಮಾರ್

ಶ್ರಿರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆ.ಆರ್.ಎಸ್ ಅಣೆಕಟ್ಟೆಯಿಂದ ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿ ಹಾಗೂ ನಾಗಮಂಗಲ ತಾಲ್ಲೂಕಿನ ದೇವಲಾಪುರ ಹೋಬಳಿಗಳಿಗೆ ಕಾವೇರಿ ನೀರನ್ನು ಹರಿಸಲು 1,000 ಕೋಟಿ ರೂ.ಗಳ ಯೋಜನೆ ತಯಾರಾಗುತ್ತಿದ್ದು, ನನ್ನ ಅಧಿಕಾರಾವಧಿಯಲ್ಲಿಯೇ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮಂಡ್ಯ ಶಾಸಕ ರವಿಕುಮಾರ್ ಗಣಿಗ ಭರವಸೆ ನೀಡಿದರು.

ಮಂಡ್ಯ ವಿಧಾನಸಭಾ ಕ್ಷೇತ್ರದ ಬಸರಾಳು ಮುಖ್ಯ ವೃತ್ತ ಅಭಿವೃದ್ಧಿ, ಪುಟಪಾತ್ ನಿರ್ಮಾಣ ಹಾಗೂ ಬಸರಾಳು-ಕೊಡಿಕೊಪ್ಪಲು ಸಂಪರ್ಕ ರಸ್ತೆ ಅಭಿವೃದ್ಧಿ ಮಾಡುವ ₹2 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಬಸರಾಳು ಹೋಬಳಿಯಲ್ಲಿ ಈಗಾಗಲೇ ನೂರಾರು ಕೋಟಿ ರೂ.ಗಳ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿವೆ, ವಾರಕ್ಕೆ ಒಂದೊಂದು ಕಾಮಗಾರಿಗಳ ಗುದ್ದಲಿಪೂಜೆ ನಡೆಯುತ್ತಿವೆ, ಇನ್ನೂ ಒಂದು ವಾರದಲ್ಲಿ ಬಸರಾಳಿನ ಬಸ್ ನಿಲ್ದಾಣದ ಕಾಮಗಾರಿ ಪ್ರಾರಂಭವಾಗಲಿದೆ, ಅಲ್ಲದೇ ಕಾಲಭೈರವೇಶ್ವರ ಕಲ್ಯಾಣ ಮಂಟಪವನ್ನು 50 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ದಿ ಮಾಡಲಾಗುವುದು, ಇದರಿಂದ ಬಡವರು ತಮ್ಮ ಮಕ್ಕಳ ಮದುವೆಯನ್ನು ಕಡಿಮೆ ವೆಚ್ಚದಲ್ಲಿ ಮಾಡಲು ಸಾಧ್ಯವಾಗುತ್ತದೆ ಎಂದರು.

ಪ್ರಸ್ತುತ ಮಂಡ್ಯ ಕ್ಷೇತ್ರದಲ್ಲಿ ಅಭಿವೃದ್ದಿಯ ಹೊಣೆಯೇ ಹರಿಯುತ್ತಿದೆ, ಈಗ ಮುಖ್ಯರಸ್ತೆಗಳ ಅಭಿವೃದ್ದಿಯನ್ನು ಗಮನದಲ್ಲಿಟ್ಟುಕೊಟ್ಟು ಕಾಮಗಾರಿಗಳನ್ನು ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟದಲ್ಲಿ ಅಭಿವೃದ್ದಿ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕರನ್ನು, ಬಸರಾಳು ಗ್ರಾಮಸ್ಥರು ಅಭಿನಂದಿಸಿದರು. ಗ್ರಾ.ಪಂ.ಅಧ್ಯಕ್ಷ ಜವರಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ