ಮೈಷುಗರ್ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರ ಆಡಳಿತ ಕಚೇರಿ ಉದ್ಘಾಟನೆ ಹಾಗೂ ಅಧಿಕಾರ ಸ್ವೀಕಾರ ಕಾರ್ಯಕ್ರಮವು ಮಂಡ್ಯದ ಮೈಷುಗರ್ ಕಾರ್ಖಾನೆಯಲ್ಲಿ ಮಾ.4ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ. ಆದ್ದರಿಂದ ಈ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರು, ಮುಂಚೂಣಿ ಘಟಕದ ಅಧ್ಯಕ್ಷರು, ಉಸ್ತುವಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಆಗಮಿಸಬೇಕು ಎಂದು ಕೆ.ಆರ್.ಪೇಟೆ ಕಾಂಗ್ರೆಸ್ ಉಸ್ತುವಾರಿ ಸಿ.ಆರ್.ರಮೇಶ್ ಹಾಗೂ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಎನ್.ಕೃಷ್ಣೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.