Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಸಿ.ಡಿ.ಗಂಗಾಧರ್ ಹುಟ್ಟುಹಬ್ಬ : ಉಪಹಾರ ವಿತರಣೆ

ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಮೈಷುಗರ್ ಅಧ್ಯಕ್ಷರೂ ಆದ ಸಿ.ಡಿ.ಗಂಗಾಧರ್ ಅವರು ಇನ್ನು ಹೆಚ್ಚಿನ ರಾಜಕೀಯ ಅಧಿಕಾರವನ್ನು ಅನುಭವಿಸಿ ಸಾಮಾನ್ಯ ಜನರಿಗೆ ಸೌಲಭ್ಯ ಕಲ್ಪಿಸಿಕೊಡಲಿ ಎಂದು ಜಿಲ್ಲಾ ಪರಿಶಿಷ್ಟ ಜಾತಿ ಕಾಂಗ್ರೆಸ್ ಉಪಾಧ್ಯಕ್ಷ ಚಂದಗಾಲು ವಿಜಯಕುಮಾರ್ ಹೇಳಿದರು.

ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರ 56ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ
ನಗರದ ಗಣಪತಿ ದೇವಾಲಯದಲ್ಲಿ ಸಿ.ಡಿ.ಗಂಗಾಧರ್ ಹೆಸರಿನಲ್ಲಿ ಅರ್ಚನೆ ಹಾಗೂ ವಿಶೇಷ ಪೂಜೆ ಬಳಿಕ ಮಿಮ್ಸ್ ಆಸ್ಪತ್ರೆಯ ಮಮತೆಯ ಮಡಿಲಿನಲ್ಲಿ ರೋಗಿಗಳಿಗೆ ಬೆಳಗಿನ ಉಪಾಹಾರ ಹಾಗೂ ಸೇವಾ ಕಿರಣ ವೃದ್ದಾಶ್ರಮದ ವೃದ್ದರಿಗೆ ಊಟ ವಿತರಿಸಿ ಅವರು ಮಾತನಾಡಿದರು.

ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್ ಮಾತನಾಡಿ, ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಸಿ.ಡಿ.ಗಂಗಾಧರ್ ಅವರ ಪಾತ್ರ ಮಹತ್ತರವಾದುದು. ಭಗವಂತ ಅವರಿಗೆ ಆಯಸ್ಸು, ಆರೋಗ್ಯ ಕರುಣಿಸಲಿ ಎಂದು ಶುಭ ಹಾರೈಸಿದರು.

ಕಿಸಾನ್ ಕಾಂಗ್ರೆಸ್ ಮೇಲುಕೋಟೆ ಘಟಕದ ಅಧ್ಯಕ್ಷ ಸಿ.ಆರ್.ರಮೇಶ್, ಜಿ.ಪಂ ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಮೈಶುಗರ್ ಅಧ್ಯಕ್ಷರಾಗಿ ಸೇವೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಅಪಾರವಾಗಿ ಶ್ರಮಿಸಿರುವ ಸಿ.ಡಿ.ಗಂಗಾಧರ್ ಅವರಿಗೆ ಚಾಮುಂಡೇಶ್ವರಿ ತಾಯಿ ಹೆಚ್ಚಿನ ಆಯಸ್ಸು, ಆರೋಗ್ಯ, ಅಧಿಕಾರ ಕರುಣಿಸಲಿ ಎಂದು ಶುಭ ಹಾರೈಸಿದರು.

ಈ ವೇಳೆ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಎಸ್.ಸಿ, ಎಸ್.ಟಿ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಶ್ರೀಧರ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಸಿ.ಎಂ.ದ್ಯಾವಪ್ಪ,ಕಾಂಗ್ರೆಸ್ ಜಿಲ್ಲಾ ಮಾಧ್ಯಮ ಸಂಯೋಜಕ ಎನ್.ಕೃಷ್ಣೇಗೌಡ,ಕಾಂಗ್ರೆಸ್ ಮುಖಂಡರಾದ ಎಲ್.ಸಂದೇಶ್, ಚನ್ನಪ್ಪ, ಎಚ್.ಎಮ್.ಉದಯ್ ಕುಮಾರ್, ಹಳುವಾಡಿ ವೆಂಕಟೇಶ್, ಕಿರಣ್ ಕುಮಾರ್, ಅಭಿಲಾಶ್, ಮಮತೆಯ ಮಡಿಲು ಮಂಗಲ ಯೋಗೇಶ್ ಸೇರಿದಂತೆ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ