Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ವಿಜೃಂಭಣೆಯ ಕೆಂಪೇಗೌಡ ಜಯಂತಿ ಆಚರಣೆ: ಡಾ.ಕುಮಾರ

ಮಂಡ್ಯ ಜಿಲ್ಲಾಡಳಿತದ ವತಿಯಿಂದ ಜೂನ್ 27 ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯನಗರದ ಅಂಬೇಡ್ಕರ್ ಭವನದಲ್ಲಿ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯ ಸಂಬಂಧ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದರು.

ನಾಡಪ್ರಭು ಕೆಂಪೇಗೌಡ ಅವರ ಕೊಡುಗೆ, ಸಾಧನೆ ಅಪಾರ. ಅವರ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗುವುದು. ಸಂಘ ಸಂಸ್ಥೆಗಳ ಮುಖ್ಯಸ್ಥರು ಹೆಚ್ಚಿನ ಜನರನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘಟಿಸಬೇಕು ಎಂದರು.

ಜೂನ್ 27 ರಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿದೆ. ಇದರೊಂದಿಗೆ ಪೂರ್ಣಕುಂಭ ಹೊತ್ತ ಮಹಿಳೆಯರು ಭಾಗವಹಿಸಿ ಮೆರವಣಿಗೆಗೆ ವಿಶೇಷ ಮೆರಗು ನೀಡಲಿದ್ದಾರೆ ಎಂದರು.

ಹಾಜರಾತಿ ಕಡ್ಡಾಯ, ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಶಾಲಾ- ಕಾಲೇಜುಗಳಲ್ಲಿ ಕಾರ್ಯಕ್ರಮ ಆಯೋಜಿಸಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಕೊಡುಗೆಗಳ ಬಗ್ಗೆ ಮಕ್ಕಳಿಗೆ ತಿಳಿಸುವುದರ ಮೂಲಕ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜ್ ಮಾತನಾಡಿ, ಕೃಷಿ, ಸಾಹಿತ್ಯ ಸೇರಿದಂತೆ ಒಟ್ಡು ಐದು ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವವರನ್ನು ಗುರುತಿಸಿ ಸಭಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಊಟದ ವ್ಯವಸ್ಥೆಯಾಗಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯ ಮುದ್ರಣ ಹಾಗೂ ವಿತರಣೆಯ ಕೆಲಸವಾಗಬೇಕು ಎಂದರು.

ಸಭೆಯಲ್ಲಿ ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್, ನಗರಸಭೆ ಆಯುಕ್ತರಾದ ಆರ್ ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕರಾದ ಎಂ.ಉದಯ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಚೆಲುವಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಎಸ್ ರಾಜಮೂರ್ತಿ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಮೀರಾ ಶಿವಲಿಂಗಯ್ಯ, ತಗ್ಗಳ್ಳಿ ವೆಂಕಟೇಶ್, ಅಶೋಕ್, ಸುಜಾತ ಕೃಷ್ಣ, ಚಂದ್ರಶೇಖರ್, ಕೃಷ್ಣ, ಶಿವಕುಮಾರ್, ಸೌಭಾಗ್ಯ, ರವೀಂದ್ರ, ಕಾರಸವಾಡಿ ಮಹದೇವ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!