Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸಿಇಓ ಅವಹೇಳನ ಆರೋಪ ; ಕ್ರಮಕ್ಕೆ ಆಗ್ರಹಿಸಿ ನೌಕರರ ಪ್ರತಿಭಟನೆ

ಕಳೆದ ಜು.4ರಂದು ಮಂಡ್ಯ ಜಿಲ್ಲಾ ಪಂಚಾಯಿತಿ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ಅವರು ಜಿ.ಪಂ.ಸಿಇಓ ನಂದಿನಿ ಕೆ.ಆರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ಅವರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪಂಚಾಯತ್ ರಾಜ್ ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು.

ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದ ನೌಕರರು, ಕಳೆದ ಜು.4ರಂದು ಮಂಡ್ಯ ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ದಿಶಾ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘರವರು ಉದ್ಯೋಗ ಖಾತರಿ ಯೋಜನೆಯಡಿ ಕೆಲಸ, ನಿರುದ್ಯೋಗ ಭತ್ಯೆ, ಕಡಿಮೆ ಕೂಲಿಗೆ ಪರಿಹಾರ, ಸ್ಮಶಾನ ಒತ್ತುವರಿ ತೆರವು ಬಡವರಿಗೆ ನಿವೇಶನ ಮತ್ತು ಮನೆಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಲು ಬಂದ ಸಿಇಓ ಅವರ ಬಗ್ಗೆ ಪುಟ್ಟಮಾದು ಅವರು ‘ನೀವು ಈ ಜಿಲ್ಲೆಗೆ ಬಂದು ಜಿಲ್ಲೆಯನ್ನು ಹಾಳು ಮಾಡಿದ್ದೀರಿ ಎಂದು ಅವಹೇಳನಕಾರಿಯಾಗಿ ಹಾಗೂ ನಿಂದನಾತ್ಮಕವಾಗಿ ಘೋಷಣೆಗಳನ್ನು ಕೂಗಿರುತ್ತಾರೆ. ಇದರಿಂದಾಗಿ ಒಬ್ಬ ದಕ್ಷ, ಪ್ರಾಮಾಣಿಕ ಹಾಗೂ ನಿಷ್ಠಾವಂತ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ದಕ್ಕೆ, ಉಂಟಾಗುವುದಲ್ಲದೇ ಕೆಳವರ್ಗದ ನೌಕರರು ಸಹ ಆತ್ಮ ಸ್ಥೈರ್ಯ ಕಳೆದುಕೊಂಡು ತಮ್ಮ ಕರ್ತವ್ಯದಲಿ ಅಸಕ್ತಿ ಕಳೆದುಕೊಂಡು ಕುಗ್ಗಿ ಹೋಗುವ ಪರಿಸ್ಥಿತಿ ಉಂಟಾಗುತ್ತದೆ. ಆದ್ದರಿಂದ ಅವರ ವಿರುದ್ದ ಕ್ರಮ ಜರುಗಿಸಬೇಕೆಂದು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಮನವಿ ಸಲ್ಲಿಸಿದರು.

ಸಿಇಓ ನಂದಿನಿ ಕೆ.ಆರ್ ಅವರು ಅಧಿಕಾರ ವಹಿಸಿಕೊಂಡಾಗಿನಿಂದ ಹಲವು ವ್ಯವಸ್ಥೆಯನ್ನು ಚುರುಕುಗೊಳಿಸಿ, ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚು ಹೊತ್ತು ಕೊಟ್ಟು ಸರ್ಕಾರದ ಮಾರ್ಗಸೂಚಿಗಳಂತೆ ನಿಯಮನುಸಾರ ಜಿಲೆಯ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ಧಾರೆ ಎಂದು ತಿಳಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಉಪ ಕಾರ್ಯದರ್ಶಿ (ಅಭಿವೃದ್ಧಿ)ಪಿ.ಲಕ್ಮೀ, ಉಪ ಕಾರ್ಯದರ್ಶಿ (ಆಡಳಿತ) ಧನರಾಜ್, ಪಿಡಿಒ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಪ್ರಶಾಂತ್ ಬಾಬು, ಪ್ರಧಾನ ಕಾರ್ಯದರ್ಶಿ ಸುನೀಲ್, ಕ್ರೀಡಾ ಕಾರ್ಯದರ್ಶಿ ಪಿ.ಆರ್.ಹರೀಶ್, ಮಂಡ್ಯ ತಾಲೂಕು ಅಧ್ಯಕ್ಷ ಸುರೇಶ್, ಹತ್ತಕ್ಕೂ ಹೆಚ್ಚು ಸಂಘಟನೆಯ. ಸದಸ್ಯರು ಹಾಗೂ ಮಹಿಳಾ ನೌಕರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ