Wednesday, May 22, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಕುಂದುಕೊರತೆ ಅರ್ಜಿ ಸ್ವೀಕರಿಸಿದ ಸಿಇಓ ಶೇಖ್ ತನ್ವೀರ್ ಆಸೀಪ್

ಮಳವಳ್ಳಿ ಮಳವಳ್ಳಿ ತಾಲ್ಲೂಕು ಕಿರುಗಾವಲು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಿರುಗಾವಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಂದ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡ್ಯ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಪ್ ಅವರು ದೂರು, ಮನವಿಗಳನ್ನು ಸ್ವೀಕರಿಸಿದರು.

ಸಭೆಯಲ್ಲಿ ಸಾರ್ವಜನಿಕರಿಂದ ಲಿಖಿತವಾಗಿ ಒಟ್ಟು 10 ಕುಂದು ಕೊರತೆ ಅಹವಾಲುಗಳು ಸ್ವೀಕೃತಗೊಂಡಿದ್ದು, 3 ಅರ್ಜಿಗಳನ್ನು ಸ್ಥಳದಲ್ಲಿ ಇತ್ಯರ್ಥಗೊಳಿಸಲಾಯಿತು. ಇನ್ನುಳಿದ ಅರ್ಜಿಗಳಿಗೆ ಸಂಬಂಧಿಸಿದಂತೆ ನಿಯಮಾನುಸಾರ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮ ಪಂಚಾಯತ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯು.ಡಿ.ಐ.ಡಿ. ಕಾರ್ಡ್ ವಿತರಿಸಲು ಬಾಕಿ ಇರುವ ವಿಕಲಚೇತನರಿಗೆ ಪೂರ್ಣ ಪ್ರಮಾಣದಲ್ಲಿ ಯು.ಡಿ.ಐ.ಡಿ ಕಾರ್ಡ್ ಗಳನ್ನು ವಿತರಿಸಲು ಗ್ರಾಮದಲ್ಲಿ ಕ್ಯಾಂಪ್ ಆಯೋಜಿಸುವಂತೆ ಸಾರ್ವಜನಿಕರು ಮನವಿ ಮಾಡಿದರು. ಈ ವಿಷಯದ ಬಗ್ಗೆ ಜಿಲ್ಲಾ ಅಂಕವಿಕಲಕರ ಕಲ್ಯಾಣಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಶಿಬಿರ ಆಯೋಜಿಸಿ, ಎಲ್ಲಾ ವಿಕಲಚೇತನರಿಗೆ ಶೇಕಡ 100 ರಷ್ಟು ಯು.ಡಿ.ಐ.ಡಿ. ಕಾರ್ಡ್ ವಿತರಿಸಲು ತುರ್ತಾಗಿ ಕ್ರಮವಹಿಸುವಂತೆ ಸೂಚಿಸಿದರು.

ಕಿರುಗಾವಲು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ತರಗತಿಗಳ ಕೊಠಡಿಗಳು ಹಾಗೂ ಶೌಚಾಲಯ ಘಟಕಗಳ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು. ಪ್ರೌಢಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿ ಮೂಲ ಸೌಕರ್ಯ ಕಲ್ಪಿಸಿರುವ ಬಗ್ಗೆ ಹಾಗೂ ವಿದ್ಯಾರ್ಥಿಗಳ ಕಲಿಕೆ ಬಗ್ಗೆ ಹಾಗೂ ಉತ್ತಮ ರೀತಿಯಲ್ಲಿ ಪಾಠ ಪ್ರವಚನಗಳನ್ನು ನೀಡುತ್ತಿರುವ ಬಗ್ಗೆ ಪರಿಶೀಲಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಿರುವ ಬಗ್ಗೆ, ಕುಡಿಯುವ ನೀರು ಯೋಜನೆ, ಸ್ವಚ್ಛ ಭಾರತ್ ಮಿಷನ್ ಯೋಜನೆ, ಮಹಾತ್ಮಗಾಂಧಿ ನರೇಗಾ ಯೋಜನೆ ಹಾಗೂ ವಸತಿ ಯೋಜನೆಗಳ ಪ್ರಗತಿ ಪರಿಶೀಲಿಸಿದರು.

ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಮಳವಳ್ಳಿ ತಾ.ಪಂ.ನ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾ.ಪಂ. ಪಿ.ಡಿ.ಓ. ಹಾಗೂ ಸಾರ್ವಜನಿಕರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!