ತಮಿಳುನಾಡಿಗೆ ರಾಜ್ಯದ ಜಲಾಶಯಗಳಿಂದ ನೀರು ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕನ್ನಡ ಸೇನೆ ಕಾರ್ಯಕರ್ತರು ಮಂಡ್ಯನಗರದಲ್ಲಿ ಚಡ್ಡಿ ಮೆರವಣಿಗೆ ನಡೆಸಿದರು.
ಮಂಡ್ಯ ನಗರದ ಸಂಜಯ ವೃತ್ತದಿಂದ ಪಟಾಪಟಿ ಚಡ್ಡಿ ಧರಿಸಿ, ಖಾಲಿ ಬಿಂದಿಗೆ ಪ್ರದರ್ಶಿಸಿ ಮೆರವಣಿಗೆ ಹೊರಟ ಪ್ರತಿಭಟನಕಾರರು ಜನಪ್ರತಿನಿಧಿಗಳ ವಿರುದ್ದ ಘೋಷಣೆಗಳನ್ನು ಕೂಗಿದರು.
ರಾಜ್ಯ ಸರ್ಕಾರದ ಕಾವೇರಿ ಕಣಿವೆ ಜಿಲ್ಲೆಗಳ ರೈತರ ಹಿತ ಕಾಪಾಡಲು ವಿಫಲವಾಗಿದೆ. ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು, ಈಗಾಗಲೇ ನೆರೆ ರಾಜ್ಯಕ್ಕೆ ಕೆ ಆರ್ ಎಸ್ ನಲ್ಲಿದ್ದ ನೀರು ಹರಿದು ಹೋಗಿದ್ದು ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಆದ್ದರಿಂದ ಮಂಡ್ಯ ಜಿಲ್ಲೆಗೆ 100 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು , ನೀರು ಬರಿದು ಮಾಡಿ ರೈತರ ಬೆಳೆಗೆ ನೀರಿಲ್ಲದಂತೆ ಮಾಡಿರುವ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು ಎಂದು ಒತ್ತಾಯಿಸಿದರು.
ಚಡ್ಡಿ ಮೆರವಣಿಗೆಯಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಮಹಾಂತಪ್ಪ ನಂದೀಶ್, ಮಂಜುನಾಥ್,
ಗುತ್ತಲು ಚಂದ್ರು, ರಾಜೇಶ್, ನಂದೀಶ್, ದರ್ಶನ್ ಮತ್ತಿತರರಿದ್ದರು.




