Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಸರಗಳ್ಳನ ಬಂಧನ ; 5.60 ಲಕ್ಷ ರೂ. ಮೌಲ್ಯದ ಮಾಲುಗಳ ವಶ

ಮಹಿಳೆಯೊಬ್ಬರಿಂದ ಕರಿಮಣಿ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿದ್ದ ಸರಗಳ್ಳನನ್ನು ಬಂಧಿಸುವಲ್ಲಿ ಮಂಡ್ಯ ಜಿಲ್ಲೆಯ ಪಾಂಡವಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ಧಾರೆ.

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಜಕ್ಕೂರು ಗ್ರಾಮದ ದರ್ಶನ್.ಎಂ. ಅಲಿಯಾಸ್ ಗುಂಡು (19) ಬಂಧಿತ ಆರೋಪಿ.

ಏನಿದು ಘಟನೆ ?

ಕಳೆದ ಡಿ.7 ರಂದು ಮಧ್ಯಾಹ್ನ 3-30 ಘಂಟೆ ಸಮಯದಲ್ಲಿ ಪಾಂಡವಪುರ ತಾಲ್ಲೂಕಿನ ಕಡಬ ಗ್ರಾಮದ ಜಯಮ್ಮ ತಮ್ಮ ಮನೆ ಮುಂದೆ ಕುಳಿತಿದ್ದಾಗ, ಕುಡಿಯಲು ನೀರು ಕೇಳುವ ನೆಪದಲ್ಲಿ ಸ್ಕೂಟರಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ನೀರು ಕುಡಿದು, ಜಯಮ್ಮ ಅವರ ಕತ್ತಿನಲ್ಲಿದ್ದ ಸುಮಾರು 7 ಗ್ರಾಂ ತೂಕದ ಚಿನ್ನದ ಗುಂಡು, 3 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಇರುವ ಕರಿಮಣಿ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿ ಪರಾರಿಯಾಗಿದ್ದರು. ಈ ಬಗ್ಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿತ್ತು.

ಈ ಪ್ರಕರಣದ ಪತ್ತೆಗಾಗಿ ಶ್ರೀರಂಗಪಟ್ಟಣ ಉಪವಿಭಾಗದ ಶಾಂತಮಲ್ಲಪ್ಪರವರುಗಳ ಮಾರ್ಗದರ್ಶನದಲ್ಲಿ, ಪಾಂಡವಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶರತ್‌ಕುಮಾರ್‌ ನೇತೃತ್ವದಲ್ಲಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಉಮೇಶ.ಆರ್.ಬಿ., ಮಹೆಚ್.ಸಿ./ ಸಿ.ಹೆಚ್.ಸಿಯವರಾದ ಶೋಭ.ಜೆ., ತೌಸಿಫ್, ಸಂತೋಷ್  ಅವರ ತಂಡವನ್ನು ರಚಿಸಲಾಗಿತ್ತು. ಈ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದೆ, ಈ ಕಾರ್ಯವನ್ನು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಶ್ಲಾಘಿಸಿದ್ದಾರೆ.

ಆರೋಪಿಯಿಂದ  ಸುಮಾರು 5.60 ಲಕ್ಷ ಮೌಲ್ಯದ 47 ಗ್ರಾಂ ತೂಕದ ಚಿನ್ನದ ಒಡವೆಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಪಾಂಡವಪುರ ಪೊಲೀಸ್ ಠಾಣೆ ವ್ಯಾಪ್ತಿಯ 3 ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ