Monday, May 20, 2024

ಪ್ರಾಯೋಗಿಕ ಆವೃತ್ತಿ

ಸ್ವಾಮೀಜಿ ಬಂಧನವಾದ್ರೆ, ದೊಡ್ಡವರ ಹೆಸರು ಹೊರಬರುತ್ತೆ- ಚೈತ್ರ ಕುಂದಾಪುರ

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಕಚೇರಿಗೆ ವಿಚಾರಣೆಗಾಗಿ ಕರೆ ತಂದಿದ್ದಾರೆ.

ಈ ವೇಳೆ, ಚೈತ್ರಾ ಕುಂದಾಪುರ ಕಾರಿನಿಂದ ಇಳಿಯುವಾಗ, “ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಗಡೆ ಬರುತ್ತೆ, ಆಗ ದೊಡ್ಡ ದೊಡ್ಡವರ ಹೆಸರು ಆಚೆ ಬರುತ್ತೆ. ಇಂದಿರಾ ಕ್ಯಾಂಟೀನ್ ಬಿಲ್ ಬಾಕಿ ಇರುವುದರಿಂದ ಈ ಷಡ್ಯಂತ್ರ ನಡೆದಿದೆ” ಎಂದು ಹೇಳುತ್ತಾ ಸಿಸಿಬಿ ಕಚೇರಿಯ ಒಳಗಡೆ ಹೋದರು.

ಎ1 ಆರೋಪಿ ನೀವೆ ಅಲ್ವಾ ಎಂದು ಪ್ರಶ್ನಿಸಿದ್ದಕ್ಕೆ, “ಆಗಿರಲಿ, ಸತ್ಯ ಹೊರಗಡೆ ಬರುತ್ತೆ” ಎನ್ನುತ್ತಾ ಕಚೇರಿಯ ಒಳಗಡೆ ಹೋದರು.

ಕೋಟ್ಯಾಂತರ ವಂಚನೆ ಪ್ರಕರಣ

ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ₹5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬಂಧಿಸಿದ್ದರು.

ಚೈತ್ರಾ ಕುಂದಾಪುರ, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಎಂಬವರನ್ನು ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!