Thursday, September 19, 2024

ಪ್ರಾಯೋಗಿಕ ಆವೃತ್ತಿ

ಡಾ.ಬಿ.ಆರ್. ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ : ಚ‌ಲುವರಾಯಸ್ವಾಮಿ

ಈ ದೇಶಕ್ಕೆ ಸಂವಿಧಾನದ ಮೂಲಕ ಭದ್ರ ಬುನಾದಿ ಹಾಕಿದ ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಬೇಕಿದೆ ಎಂದು ಮಾಜಿ ಸಚಿವ ಎನ್.ಚಲುವರಾಯ ಸ್ವಾಮಿ ತಿಳಿಸಿದರು. ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಇಂದು ಅವರು ನಾಗಮಂಗಲ ತಾಲ್ಲೂಕು ಕಚೇರಿ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ್ ಜಯಂತಿಯನ್ನು ಆಚರಿಸಿದರು.

ಇಂದು ಕೆಲವರು ಅಧಿಕಾರಕ್ಕಾಗಿ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ.ಜನತೆ ಇಂತಹ ಮತೀಯ ಶಕ್ತಿಗಳ ಬಗ್ಗೆ ಎಚ್ಚರಿಕೆಯಿಂದ ಗಮನಿಸಬೇಕು ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!