Tuesday, April 30, 2024

ಪ್ರಾಯೋಗಿಕ ಆವೃತ್ತಿ

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಜಿಲ್ಲೆಯ ಅಭಿವೃದ್ಧಿ – ರವಿ ಭೋಜೇಗೌಡ

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ದಕ್ಷತೆಯಿಂದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರವಿ ಭೋಜೇಗೌಡ ತಿಳಿಸಿದರು.

ಮಂಡ್ಯ ನಗರದ ಸ್ವರ್ಣಸಂದ್ರದಲ್ಲಿರುವ ಪ್ರೇರಣಾ ಅಂಧ ಮತ್ತು ಅಂಗವಿಕಲರ ಶಾಲೆಯಲ್ಲಿ ಕೃಷಿ ಸಚಿವ ಎನ್‌‌. ಚಲುವರಾಯಸ್ವಾಮಿ ಅವರ 62 ನೇ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಮಧ್ಯಾಹ್ನದ ಊಟವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ನಾಯಕ, ನೂತನ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ರವರ ಹುಟ್ಟುಹಬ್ಬದ ಹಿನ್ನೆಲೆ ಪ್ರೇರಣಾ ವಿದ್ಯಾರ್ಥಿಗಳಿಗೆ ಅನ್ನದಾಸೋಹ ಕಾರ್ಯಕ್ರಮ  ಹಮ್ಮಿಕೊಂಡಿದ್ದೇನೆ. ನಾಡ ದೇವತೆ ತಾಯಿ ಚಾಮುಂಡೇಶ್ವರಿ ದೇವಿ ಅವರಿಗೆ ಆರೋಗ್ಯ, ಆಯಸ್ಸು ನೀಡಿ ಜನರ ಸೇವೆ ಮಾಡಲು ಮತ್ತಷ್ಟು ಅವಕಾಶ ನೀಡಲಿ ಎಂದರು.

ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಡಗೂಡಿ ಮಂಡ್ಯ ಕೃಷಿ ಪ್ರಧಾನ ಜಿಲ್ಲೆಯಾಗಿರುವುದನ್ನು ಪರಿಗಣಿಸಿ, ಚಲುವರಾಯಸ್ವಾಮಿರವರಿಗೆ ಮಹತ್ವದ ಕೃಷಿ ಖಾತೆ ನೀಡಿದ್ದಾರೆ. ಈಗ ಹೆಚ್ಚಿನ ಜವಾಬ್ದಾರಿ ನಮ್ಮ ನಾಯಕರ ಮೇಲಿದೆ.ಅವರು ಈ ಹಿಂದೆ ಎರಡು ಬಾರಿ ಸಚಿವರಾಗಿ ದಕ್ಷತೆಯಿಂದ ಕೆಲಸ ಮಾಡಿದ್ದನ್ನು ಜನರು ನೋಡಿದ್ದಾರೆ. ಈಗಾಗಲೇ ನಮ್ಮ ನಾಯಕರಾದ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಒಂದುಗೂಡಿ ಮುುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮೈಷುಗರ್ ಕಾರ್ಖಾನೆಗೆ 20 ಕೋಟಿ ಪ್ರಸ್ತಾವ ನೀಡಿದ್ದರು. ಅದರಂತೆ ಕಾರ್ಖಾನೆಗೆ 10 ಕೋಟಿ ರೂ.ಮಂಜೂರು ಮಾಡಿಸಿದ್ದಾರೆ. ಅವರ ದಿಟ್ಟ ನಿರ್ಧಾರದಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದರು.

ಸಚಿವರಾದ ಚಲುವರಾಯಸ್ವಾಮಿ ,ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ರಮೇಶ್ ಬಾಬು ಬಂಡಿಸಿದ್ದೇಗೌಡ, ಕದಲೂರು ಉದಯ್, ರವಿಕುಮಾರ್ ಗಣಿಗ ಅವರನ್ನು ಜೊತೆಗಿರಿಸಿಕೊಂಡು ಮೈಷುಗರ್ ಕಾರ್ಖಾನೆಯ ಪುನಶ್ಚೇತನ ಹಾಗೂ ಹೊಸ ಕಾರ್ಖಾನೆ ನಿರ್ಮಾಣಕ್ಕೆ ದಿಟ್ಟ ಸಂಕಲ್ಪ ಮಾಡಿ ದ್ದಾರೆ. ಅತಿ ಶೀಘ್ರವಾಗಿ ಹೊಸ ಕಾರ್ಖಾನೆ ನಿರ್ಮಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದಿಂದ ಅಧಿಕಾರ ನಡೆಸುತ್ತಿದೆ. ಕಾಂಗ್ರೆಸ್ ಸರ್ಕಾರದ ಮೇಲೆ ಜನರು ಭಾರೀ ಆಶಾಭಾವನೆ ಹೊಂದಿದ್ದಾರೆ. ಚಲುವರಾಯಸ್ವಾಮಿ ಹಾಗೂ ನರೇಂದ್ರ ಸ್ವಾಮಿ ಜಿಲ್ಲೆಯ ಅಭಿವೃದ್ಧಿಗೆ ಜೋಡೆತ್ತುಗಳಂತೆ ಕಾರ್ಯನಿರತರಾಗಿದ್ದು, ಅವರ ಜೊತೆ ಜಿಲ್ಲೆಯ ಎಲ್ಲಾ ಶಾಸಕರು ಕೈ ಜೋಡಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಅನಿಲ್ ಕುಮಾರ್, ಧನಂಜಯ್, ಪ್ರೇರಣ ಶಾಲೆಯ ರವಿಕುಮಾರ್ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!