Friday, September 20, 2024

ಪ್ರಾಯೋಗಿಕ ಆವೃತ್ತಿ

ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಸಚಿವ ಚಲುವರಾಯಸ್ವಾಮಿ

ಬೆಂಗಳೂರಿನ ಸದಾಶಿವನಗರದ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.‌ ಚಲುವರಾಯಸ್ವಾಮಿ ಅವರು ಭೇಟಿ ನೀಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ, ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ, ಮಳೆ, ಕೃಷಿ ಸಂಬಂಧಿತ ಚಟುವಟಿಕೆ ಬಗ್ಗೆ ಎಸ್.ಎಂ.ಕೃಷ್ಣ ಅವರ ಜತೆ ಚರ್ಚೆ ನಡೆಸಿದರು.

ಮಂಡ್ಯ ಜಿಲ್ಲೆಯಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಎಸ್.ಎಂ.ಕೃಷ್ಣ ಅವರು ಸಚಿವ ಚಲುವರಾಯಸ್ವಾಮಿ ಅವರಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!