Thursday, September 19, 2024

ಪ್ರಾಯೋಗಿಕ ಆವೃತ್ತಿ

ಕನ್ನಡ ನಾಡಿನಲ್ಲಿ ಜನಿಸಿರುವುದು ಪೂರ್ವ ಜನ್ಮದ ಪುಣ್ಯ: ಚಲುವರಾಯಸ್ವಾಮಿ

ಶತಶತಮಾನಗಳ ಸಾಂಸ್ಕೃತಿಕ, ಚಾರಿತ್ರಿಕ, ಸಾಹಿತ್ಯಿಕ, ಸಾಮಾಜಿಕ, ಶೈಕ್ಷಣಿಕ, ಶ್ರೀಮಂತಿಕೆ ಹೊಂದಿರುವ ಕನ್ನಡ ನಾಡಿನಲ್ಲಿ ಜನಿಸಿರುವುದು ನಮ್ಮೆಲ್ಲರ ಪೂರ್ವ ಜನ್ಮದ ಪುಣ್ಯ.ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು‌.

ಮಂಡ್ಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ  ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾಷಾವಾರು ಪ್ರಾಂತ್ಯ ರಚನೆಯ ಉದ್ದೇಶದಿಂದ ಕನ್ನಡ ಭಾಷೆಯನ್ನು ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ದಿನಾಂಕ: 01-11-1956 ರಂದು ವಿಶಾಲ ಮೈಸೂರು ರಾಜ್ಯವನ್ನು ರಚಿಸಲಾಯಿತು. ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಅಥವಾ ಕನ್ನಡ ದಿನ ಎಂದು ಆಚರಿಸಲಾಗುತ್ತದೆ. ಇದನ್ನು ಕರ್ನಾಟಕ ರಚನೆಯ ದಿನ ಅಥವಾ ಕರ್ನಾಟಕ ಏಕೀಕರಣ ದಿನ ಎಂದು ಕರೆಯಲಾಗುತ್ತದೆ ಎಂದರು.

ಶಕ್ತಿ ಯೋಜನೆ ಸದುಪಯೋಗ

ಮಂಡ್ಯ ಜಿಲ್ಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೆ 1.94 ಕೋಟಿ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆ ಸದುಪಯೋಗ ಪಡೆಸಿಕೊಂಡಿದ್ದು, ರೂ.47.30 ಕೋಟಿ ಸರ್ಕಾರದಿಂದ ಭರಿಸಲಾಗುತ್ತಿದೆ. ರಾಜ್ಯ ಸರ್ಕಾರ ಬಿ.ಪಿ.ಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಪ್ರತಿ ವ್ಯಕ್ತಿಗೆ ಪ್ರತಿ ತಿಂಗಳು ಗರಿಷ್ಠ 10 ಕೆ.ಜಿ ಅಕ್ಕಿಯನ್ನು ನೀಡಲು ತೀರ್ಮಾನಿಸಿ “ಅನ್ನಭಾಗ್ಯ” ಯೋಜನೆಯನ್ನು ಜಾರಿಗೆ ತಂದಿದೆ. ಮಂಡ್ಯ ಜಿಲ್ಲೆಯಲ್ಲಿ ಒಟ್ಟು 4,77,561 ಪಡಿತರ ಕುಟುಂಬಗಳು ಈ ಯೋಜನೆಯ ಸದುಪಯೋಗ ಪಡೆಯುತ್ತಿದ್ದಾರೆ. ಪ್ರಾರಂಭಿಕ ಹಂತದಲ್ಲಿ 5 ಕೆ.ಜಿ ಹೆಚ್ಚುವರಿ ಅಕ್ಕಿ ವಿತರಣೆ ಬದಲಿಗೆ ಪ್ರತಿ ಕೆ.ಜಿ ಗೆ ರೂ.34/-ರಂತೆ ಪ್ರತಿ ಯುನಿಟ್‌ಗೆ ರೂ.170/- ಗಳಂತೆ ನೀಡುತ್ತಿದ್ದು, ಮಂಡ್ಯ ಜಿಲ್ಲೆಯಲ್ಲಿ 2023 ಜುಲೈ ಮಾಹೆಯಿಂದ ಸೆಪ್ಟೆಂಬರ್ ಮಾಹೆಯ ವರೆಗೆ 12,45,756 ಫಲಾನುಭವಿಗಳಿಗೆ ರೂ.68.19 ಕೋಟಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

4,07,457 ಗೃಹಲಕ್ಷ್ಮಿ ಪ್ರಯೋಜನ

ಮಹಿಳೆಯರ ಆರ್ಥಿಕ ಸಬಲೀಕರಣದತ್ತ ದಿಟ್ಟ ಹೆಜ್ಜೆಯಿಟ್ಟಿರುವ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು, ಜಿಲ್ಲೆಯಲ್ಲಿ ಸೆಪ್ಟೆಂಬರ್-2023ರ ಮಾಹೆಯ ಅಂತ್ಯದವರೆಗೆ 4,33,854 ಮಂದಿ ಮಹಿಳೆಯರು ನೋಂದಾಯಿಸಿಕೊAಡಿದ್ದು, ಒಟ್ಟು 4,07,457 ಮಹಿಳೆಯರಿಗೆ ಈಗಾಗಲೇ ರೂ.2,000 ಗಳಂತೆ ಇಲ್ಲಿಯವರೆಗೆ ಒಟ್ಟು ರೂ.81.49 ಕೋಟಿಗಳನ್ನು ಪಾವತಿಸಲಾಗಿದೆ ಎಂದರು.

4,47,786 ಗ್ರಾಹಕರಿಗೆ ಗೃಹಜ್ಯೋತಿ ಪ್ರಯೋಜನ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಒಟ್ಟು 4,47,786 ವಿದ್ಯುತ್ ಗ್ರಾಹಕರು ಹೆಸರು ನೊಂದಾಯಿಸಿಕೊಂಡಿದ್ದಾರೆ. ಸೆಪ್ಟೆಂಬರ್ ಮಾಹೆಯಲ್ಲಿ ರೂ.1,649 ಲಕ್ಷ ಮೊತ್ತದ ವಿದ್ಯುತ್ ಬಿಲ್ ಹಾಗೂ ಅಕ್ಟೋಬರ್ ಮಾಹೆಯಲ್ಲಿ ರೂ.1,580 ಲಕ್ಷ ಮೊತ್ತದ ವಿದ್ಯುತ್ ಬಿಲ್ ಸರ್ಕಾರದಿಂದ ಪಾವತಿಸಲಾಗಿದೆ ಎಂದರು.

2,25,000 ಮೆಟ್ರಿಕ್ ಟನ್ ಕಬ್ಬು ನುರಿತ

•ಮೈಸೂರು ಸಕ್ಕರೆ ಕಂಪನಿಯ 2023-24ನೇ ಸಾಲಿನ ಕಬ್ಬು ನುರಿಯುವ ಚಾಲನೆಯನ್ನು ಜುಲೈ 06ರಿಂದ ಪ್ರಾರಂಭಿಸಿ ಇಲ್ಲಿವರೆಗೆೆ 2,25,000 ಮೆಟ್ರಿಕ್ ಟನ್ ಕಬ್ಬು ನುರಿಸಿ 1,58,000 ಕ್ವಿಂಟಾಲ್ ಸಕ್ಕರೆಯನ್ನು ಉತ್ಪಾದಿಸಲಾಗಿದೆ. ಪ್ರಸ್ತುತ ಅಕ್ಟೋಬರ್ 10 ರವರೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ರೂ.54.34 ಕೋಟಿ ಹಣ ಸಂದಾಯ ಮಾಡಲಾಗಿದೆ. ಪ್ರಸ್ತುತ 2023-24 ನೇ ಸಾಲಿನಲ್ಲಿ 5.00 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಯುವ ಗುರಿ ಹೊಂದಲಾಗಿರುತ್ತದೆ. ಅಂದಾಜು 4.00 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದನೆ ಮಾಡಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್ ನಾಗರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!