Friday, September 20, 2024

ಪ್ರಾಯೋಗಿಕ ಆವೃತ್ತಿ

ಚಲುವರಾಯಸ್ವಾಮಿ ವಿರುದ್ಧ ಅಪಪ್ರಚಾರ : ವಿರೋಧಿಗಳ ನಡೆ ಖಂಡನೀಯ

ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರೊಂದಿಗೆ ಕಾರ್ಡ್ಸ್ ಆಡುತ್ತಿರುವ ಫೋಟೋ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹತ್ತಾರು ವರ್ಷಗಳ ಹಿಂದೆ ಕ್ಲಬ್ ಒಂದರಲ್ಲಿ ಕಾರ್ಡ್ಸ್ ಆಡುತ್ತಿದ್ದ ಫೋಟೋವನ್ನು ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದೆ‌.ಈ ಬಗ್ಗೆ ದೃಶ್ಯ ಮಾಧ್ಯಮಗಳಲ್ಲೂ ಕೂಡ ಈ ಫೋಟೋ ಸಾಕಷ್ಟು ಸದ್ದು ಮಾಡುತ್ತಿದೆ.

ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಂಡ್ಯ ತಾ.ಪಂ. ಮಾಜಿ ಅಧ್ಯಕ್ಷ ಹೆಚ್.ಸಿ. ತ್ಯಾಗರಾಜು, ಮಂಡ್ಯ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕನಸು ಕಾಣುತ್ತಿರುವ ಧೀಮಂತ ರಾಜಕಾರಣಿ ಚಲುವರಾಯಸ್ವಾಮಿ ವಿರುದ್ಧ ಕೆಲವು ವಿರೋಧಿಗಳು ಅಪ ಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಎಂದು ನುಡಿ ಕರ್ನಾಟಕ. ಕಾಮ್ ಜೊತೆ ಮಾತನಾಡಿ ಅಸಮಾಧಾನ ವ್ಯಕ್ತಪಡಿಸಿದರು.

ಹೆಚ್.ಸಿ.ತ್ಯಾಗರಾಜು, ಎನ್.ಚಲುವರಾಯಸ್ವಾಮಿ

ಕಾಂಗ್ರೆಸ್ ನಾಯಕರಾದ ಚಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕನಸುಗಳನ್ನು ಹೊತ್ತು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸಿದ್ದಾರೆ.ಜಿಲ್ಲೆಯ ಏಳು ವಿಧಾನಸಭಾ ಕ್ಚೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಸರ್ಕಾರ ಅಧಿಕಾರಕ್ಕೆ ಬರಲು ಶ್ರಮಿಸುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಹತ್ತಾರು ವರ್ಷಗಳ ಹಿಂದಿನ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ವೈರಲ್ ಮಾಡುವ ಮೂಲಕ ಅವರನ್ನು ತೇಜೋವಧೆ ಮಾಡಲು ಹೊರಟಿರುವುದು ಸರಿಯಲ್ಲ.
ಚಲುವರಾಯಸ್ವಾಮಿ ಅವರು ಎಂದಿಗೂ ವಿರೋಧಿಗಳ ಕ್ಷುಲ್ಲಕ ರಾಜಕಾರಣಕ್ಕೆ ಎದೆಗುಂದುವವರಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಜಿಲ್ಲೆಯ ಎಲ್ಲಾ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸುತ್ತಿದ್ದಾರೆ.

ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಜಿಲ್ಲೆಯ ಜನರು ಆಶೀರ್ವಾದ ಮಾಡಲಿದ್ದು, ಇದನ್ನು ಸಹಿಸದೆ ಕೆಲವರು ಚಲುವರಾಯಸ್ವಾಮಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಹೊರಟಿರುವುದು ಸರಿಯಲ್ಲ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸುತ್ತಿರುವ ಚಲುವರಾಯಸ್ವಾಮಿ ನಾಯಕತ್ವದಲ್ಲಿ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನತೆ ಆಶೀರ್ವದಿಸುತ್ತಾರೆಂಬ ಪರಿಪೂರ್ಣ ವಿಶ್ವಾಸವಿದೆ.

ಜನತೆ ಕಿಡಿಗೇಡಿಗಳ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಚಲುವರಾಯಸ್ವಾಮಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಬೇಕೆಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!