Thursday, September 19, 2024

ಪ್ರಾಯೋಗಿಕ ಆವೃತ್ತಿ

ಚಲುವರಾಯಸ್ವಾಮಿ ಜನ್ಮದಿನ:ರಕ್ತದಾನ,ಹಣ್ಣು ವಿತರಣೆ

ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು ರಕ್ತದಾನ ಶಿಬಿರ ಹಾಗೂ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.

ಮೊದಲಿಗೆ ಮಂಡ್ಯ ನಗರದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಉಪಾಧ್ಯಕ್ಷ ಎನ್. ಚಲುವರಾಯಸ್ವಾಮಿ ಅವರ ಜನ್ಮದಿನ ಪ್ರಯುಕ್ತ ಆಯುಸ್ಸು,ಆರೋಗ್ಯ ಮತ್ತು ರಾಜಕೀಯ ಭವಿಷ್ಯ ಉಜ್ವಲಕ್ಕಾಗಿ ಶ್ರೀವಿದ್ಯಾಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಕಂಬದಹಳ್ಳಿ ಪುಟ್ಟಸ್ವಾಮಿ ಅವರು, ಕೆಪಿಸಿಸಿ ಉಪಾಧ್ಯಕ್ಷರಾದ ಎನ್. ಚಲುವರಾಯಸ್ವಾಮಿ ಅವರ ಆಯಸ್ಸು,ಆರೋಗ್ಯ ವೃದ್ಧಿಯಾಗಲಿ.ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವ ಅವರ ನಾಯಕತ್ವವು ಹೀಗೇ ಮುಂದುವರಿಯಲಿ, ರಾಜಕೀಯ ಭವಿಷ್ಯದಲ್ಲಿ ಉನ್ನತ ಸ್ಥಾನ ಸಿಗಲಿ ಎಂದು ಶುಭ ಹಾರೈಸಿದರು .

ರಕ್ತದಾನ
ಮಂಡ್ಯ ನಗರದ ಕಾವೇರಿ ನರ್ಸಿಂಗ್ ಹೋಂನಲ್ಲಿ ಚಲುವರಾಯಸ್ವಾಮಿ ಅಭಿಮಾನಿಗಳು ರಕ್ತದಾನ ಮಾಡಿದರು. ಜಿಲ್ಲಾ ಕಾಂಗ್ರೆಸ್ ಮುಖಂಡ ಡಾ. ಕೃಷ್ಣ ಅವರ ನೇತೃತ್ವದಲ್ಲಿ ನಡೆಯಿತು .
ರಕ್ತದಾನ ಕಾರ್ಯಕ್ರಮದಲ್ಲಿ ಮಿಮ್ಸ್ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿಕೊಂಡರು .
ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ನೂರಾರು ಜನರಿಗೆ ಆರೋಗ್ಯ ಪರೀಕ್ಷೆ ಮಾಡಲಾಯಿತು.

ಜಿಲ್ಲಾ ಕಾಂಗ್ರೆಸ್ ಮುಖಂಡ ಡಾ.ಕೃಷ್ಣ ಮಾತನಾಡಿ, ಚಲುವರಾಯಸ್ವಾಮಿ ಅವರ ಮುಂದಿನ ರಾಜಕೀಯ ಭವಿಷ್ಯ ಉಜ್ವಲವಾಗಲಿ ಮತ್ತು ದೇವರು ಅವರಿಗೆ ಆಯಸ್ಸು, ಆರೋಗ್ಯ ನೀಡಲಿ ಎಂದು ಶುಭಕೋರಿದರು.

ಮಕ್ಕಳಿಗೆ ಸಿಹಿ ವಿತರಣೆ

ಮಂಡ್ಯ ನಗರದ ಕ್ಯಾತುಂಗೆರೆ ಸಮೀಪ ಇರುವ ವಿಕಸನ ಜೋಗುಳ ದತ್ತು ಸೇವಾ ಕೇಂದ್ರದ ಆವರಣದಲ್ಲಿ ನಿರಂತರ ಟ್ರಸ್ಟ್ ಆಯೋಜಿಸಿದ್ದ ಕೆಪಿಸಿಸಿ ಉಪಾಧ್ಯಕ್ಷ ಎನ್ ಚಲುವರಾಯಸ್ವಾಮಿ ಜನ್ಮದಿನ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಮುಖಂಡ ಸಿದ್ಧಾರೂಢ ಸತೀಶ್ ಗೌಡ ಅನಾಥ ಮಕ್ಕಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿ ಸಿಹಿ ವಿತರಿಸಿದರು.

ಈ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ನಾನು ಆರ್ಥಿಕ ನೆರವು ನೀಡಿದ್ದೇವೆ ಮತ್ತು ಇವರ ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯಕ್ಕಾಗಿ ಮುಂದಿನ ದಿನಗಳಲ್ಲಿ ನೆರವು ನೀಡುತ್ತೇವೆ ಎಂದರು .

ಹಣ್ಣು-ಹಂಪಲು ವಿತರಣೆ

ಮಂಡ್ಯದ ಜಿಲ್ಲಾ ಆಸ್ಪತ್ರೆಯ ಒಳರೋಗಿಗಳಿಗೆ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಡಾ.ಕೃಷ್ಣ ಅವರ ನೇತೃತ್ವದಲ್ಲಿ ಹಣ್ಣು-ಹಂಪಲು ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಮಹಿಳಾ ಅಧ್ಯಕ್ಷೆ ಅಂಜನಾ ಶ್ರೀಕಾಂತ್,ತಾ.ಪಂ.ಮಾಜಿ ಅಧ್ಯಕ್ಷ ತ್ಯಾಗರಾಜು,ಜಿಲ್ಲಾ ಕಾಂಗ್ರೆಸ್ ಮುಖಂಡ ಸಿದ್ಧಾರೂಢ ಸತೀಶ್ ಗೌಡ, ದೊರೆರಾಜ್, ಕಂಬದಹಳ್ಳಿ ಪುಟ್ಟಸ್ವಾಮಿ,ಸಿ.ಎಂ.ದ್ಯಾವಪ್ಪ,ಹಾಲಹಳ್ಳಿ ಅಶೋಕ್,ಅಮ್ಜದ್ ಪಾಷಾ ಹೀನಾ ಜುನೇದ್,ವೀಣಾ ಶಂಕರ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!