Thursday, September 19, 2024

ಪ್ರಾಯೋಗಿಕ ಆವೃತ್ತಿ

ರಾಗಿ-ಭತ್ತದ ತಳಿಗೆ ಜಿ ಮಾದೇಗೌಡರ ಹೆಸರಿಡಲು ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ

ರಾಗಿ ಅಥವಾ ಭತ್ತದ ತಳಿಗೆ ರಾಜ್ಯದ ಹಿರಿಯ ಮುತ್ಸದ್ದಿ, ರೈತ ಹೋರಾಟಗಾರ ದಿ ಜಿ ಮಾದೇಗೌಡರ ಹೆಸರಿಡಲು ಕ್ರಮ ವಹಿಸಿ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.

ಜುಲೈ 12ರ ಸೋಮವಾರ ನಡೆದಿದ್ದ ಡಾ. ಜಿ ಮಾದೇಗೌಡ ಪ್ರತಿಷ್ಠಾನದ 23ನೇ ವರ್ಷದ ರಾಜ್ಯ ಮಟ್ಟದ ಜಿ. ಮಾದೇಗೌಡ ಸಮಾಜಸೇವಾ ಮತ್ತು ಸಾವಯವ ಕೃಷಿ ಪ್ರಶಸ್ತಿ ಸಮಾರಂಭದಲ್ಲಿ ಶಾಸಕ ದಿನೇಶ್‌ ಗೂಳಿಗೌಡ ಅವರು ಈ ವಿಷಯದ ಬಗ್ಗೆ ಕೃಷಿ ಸಚಿವರ ಗಮನ ಸೆಳೆದಿದ್ದರು. ಶಾಸಕ ದಿನೇಶ್‌ ಗೂಳಿಗೌಡ ಅವರ ಮನವಿಗೆ ಸಚಿವರು ಸ್ಪಂದಿಸಿದ್ದಾರೆ.

ಈ ಮನವಿಗೆ ಅದೇ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದರು. ತುರ್ತಾಗಿ ಈ ಬಗ್ಗೆ ಕ್ರಮ ವಹಿಸುವುದಾಗಿಯೂ ಹೇಳಿದ್ದರು. ಈಗ ಈ ಸಂಬಂಧ ಕ್ರಮ ವಹಿಸುವಂತೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ದಿನೇಶ್‌ ಗೂಳಿಗೌಡ, ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತುರ್ತಾಗಿ ಸ್ಪಂದಿಸಿರುವುದು ನಿಜಕ್ಕೂ ಅಭಿನಂದನೀಯ ಎಂದು ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!