Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಳೆ ಸಚಿವ ಚಲುವರಾಯಸ್ವಾಮಿ ಪ್ರವಾಸ

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು‌ ಜನವರಿ 5 ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಿಗ್ಗೆ 8.30 ಗಂಟೆಗೆ ಮದ್ದೂರು ಮಾಜಿ ಶಾಸಕರಾದ ಜಯವಾಣಿ ಮಂಚೇಗೌಡ ರವರ ಮನೆಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10.00 ಗಂಟೆಗೆ ಮಂಡ್ಯ ತಾಲೂಕು ಕೆರಗೋಡು ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿ, ಕೆರಗೋಡು, ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಾರಗೌಡನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ದ್ಯಾಪಸಂದ್ರದ ಶ್ರೀ ಶಂಕರಲಿಂಗೇಗೌಡರ ಮನೆಗೆ ಭೇಟಿ ನೀಡಲಿದ್ದಾರೆ.

ನಂತರ ಮಧ್ಯಾಹ್ನ 1.30 ಗಂಟೆಗೆ ನಾಗಮಂಗಲ ತಾಲೂಕಿನ ಮದ್ದೇನಹಟ್ಟಿ ಗ್ರಾಮದಲ್ಲಿ ಸಮಯವನ್ನು  ಕಾಯ್ದಿರಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ನಾಗಮಂಗಲ ತಾಲೂಕಿನ ಚೌಧರಿ ಕೊಪ್ಪಲು ಗ್ರಾಮದ ಹೊ ಶ್ರೀನಿವಾಸಯ್ಯ ಇವರ ಜನ್ಮದಿನದ ಅಂಗವಾಗಿ ಏರ್ಪಡಿಸಲಾಗಿರುವ ಸಭಾಂಗಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 4.30 ಗಂಟೆಗೆ ನಾಗಮಂಗಲ ತಾಲೂಕಿನ ಕಾಚೇನಹಳ್ಳಿ ಗ್ರಾಮದ ಶ್ರೀ ಓಂ ಶಕ್ತಿ ದೇವಸ್ಥಾನಕ್ಕೆ ಭೇಟಿ ನೀಡುವರು. ಸಂಜೆ 5.00 ಗಂಟೆಗೆ ನಾಗಮಂಗಲ ತಾಲೂಕಿನ ಹುಲಿಕೆರೆ ಗ್ರಾಮದ ಗ್ರಾಮ ಪಂಚಾಯಿತಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 5:30 ಗಂಟೆಗೆ ಹುಲಿಕೆರೆ ಗ್ರಾಮದ ರಸ್ತೆಯ ಮೂಲಕ ಬೆಳ್ಳೂರು ಕ್ರಾಸ್, ಯಡಿಯೂರು, ಕುಣಿಗಲ್, ನೆಲಮಂಗಲ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರು ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ