ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಅವರು ಜನವರಿ 20 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ,
ಜನವರಿ 20 ರಂದು ಬೆಳಗ್ಗೆ 9 ಗಂಟೆಗೆ ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಕೊಪ್ಪದಲ್ಲಿ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮದ್ಯಾಹ್ನ 1.30 ಗಂಟೆಗೆ ಕೊಪ್ಪದಿಂದ ರಸ್ತೆ ಮೂಲಕ ಮದ್ದೂರು, ಚನ್ನಪಟ್ಟಣ, ರಾಮನಗರ, ಬಿಡದಿ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳುವರು.




