Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ನಾಳೆ ಸಚಿವ ಚಲುವರಾಯಸ್ವಾಮಿ ಪ್ರವಾಸ

ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು‌ ಏಪ್ರಿಲ್ 30 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 9.30 ಗಂಟೆಗೆ ಮಂಡ್ಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 10.30 ಗಂಟೆಗೆ ಮಂಡ್ಯ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆಯಲಿರುವ ವಿಶ್ವಗುರು ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಮಂಡ್ಯ ಜಿಲ್ಲೆಯಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ನಂತರ ಮಧ್ಯಾಹ್ನ 2.30 ಗಂಟೆಗೆ ಮಂಡ್ಯ ರಸ್ತೆಯ ಮೂಲಕ ಮದ್ದೂರು- ಚನ್ನಪಟ್ಟಣ -ರಾಮನಗರ- ಬಿಡದಿ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರು ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ