Saturday, November 21, 2026

ಪ್ರಾಯೋಗಿಕ ಆವೃತ್ತಿ

ಪಾಂಡವಪುರ | ಜ.5ರಂದು ಚಲುವೇಗೌಡ ಅಭಿನಂದನಾ ಸಮಾರಂಭ

ಎನ್. ಚಲುವೇಗೌಡ ಅಭಿನಂದನಾ ಸಮಿತಿ ಪಾಂಡವಪುರ ವತಿಯಿಂದ ಇತ್ತೀಚೆಗೆ ಉಪನ್ಯಾಸಕ ವೃತ್ತಿಯಿಂದ ವಯೋ ನಿವೃತ್ತಿಗೊಂಡ ಕನ್ನಡ ಉಪನ್ಯಾಸಕ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎನ್.ಚಲುವೇಗೌಡ ಅವರ ಅಭಿನಂದನೆ ಹಾಗೂ ‘ಛಲಗಾರ ಚಲುವ’ ಅಭಿನಂದನಾ ಕೃತಿ ಬಿಡುಗಡೆ ಸಮಾರಂಭವು ಜ.5ವರಂದು ಭಾನುವಾರ ಬೆಳಗ್ಗೆ 10ಕ್ಕೆ ಪಾಂಡವಪುರ ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ನಡೆಯಲಿದೆ.

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಕಾರ್ಯಕ್ರಮ ಉದ್ಘಾಟಿಸುವರು.

ಛಲಗಾರ ಚಲುವ ಅಭಿನಂದನಾ ಕೃತಿಯನ್ನು ಖ್ಯಾತ ವಾಗ್ಮಿ ಹಾಗೂ ಸಾಂಸ್ಕೃತಿಕ ಚಿಂತಕ ಪ್ರೊ.ಎಂ.ಕೃಷ್ಣೇಗೌಡ ಬಿಡುಗಡೆ ಮಾಡಲಿದ್ದು, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಅವರು ಚಲುವೇಗೌಡರನ್ನು ಕುರಿತು ಅಭಿನಂದನಾ ಭಾಷಣ ಮಾಡಲಿದ್ದಾರೆ. ವಿದ್ಯಾ ಪ್ರಚಾರ ಸಂಘದ ಗೌರವಕಾರ್ಯದರ್ಶಿ ಕೆ.ವಿ.ಬಸವರಾಜು ಅಭಿನಂದನೆ ಸಲ್ಲಿಸುವರು. ಅಭಿನಂದನೆ ಕೃತಿ ಕುರಿತು ಡಾ.ಎಚ್.ಎಸ್.ಮುದ್ದೇಗೌಡ ಸಂಪಾದಕರು, ಜೀವನಾಡಿ ಮಾಸಪತ್ರಿಕೆ ಮಾತನಾಡುವರು.

ವಿಶೇಷ ಆಹ್ವಾನಿತರಾಗಿ ಶಾಸಕರಾದ ಕೆ.ವಿವೇಕಾನಂದ, ಮಾಜಿ ಶಾಸಕರಾದ ಎನ್.ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು, ಕೆಪಿಸಿಸಿ ಸದಸ್ಯ ಡಾ. ಬಿ.ರೇವಣ್ಣ, ಬಿಜೆಪಿಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಕರ್ನಾಟಕ ವೈದ್ಯಕೀಯ ಪರಿಷತ್ ನಿರ್ದೇಶಕ ಡಾ.ಎಚ್.ಎನ್.ರವೀಂದ್ರ, ಸಿಂಡಿಕೇಟ್ ಮಾಜಿ ಸದಸ್ಯ ಡಾ. ಈ.ಸಿ.ನಿಂಗರಾಜೇಗೌಡ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಚಲುವಯ್ಯ, ಬಿಜಿಎಸ್ ಎಜುಕೇಷನ್ ಸೆಂಟರ್ ನ ಕಾರ್ಯದರ್ಶಿ ಡಾ. ಜೆ.ಎನ್. ರಾಮಕೃಷ್ಣೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶಾರದಮ್ಮ, ಜಯದೇವ ಹೃದ್ರೋಗ ಸಂಸ್ಥೆ, ಬೆಂಗಳೂರು ನಿವೃತ್ತ ಮುಖ್ಯ ಆಡಳಿತಾಧಿಕಾರಿ ಚಿಕ್ಕತಿಮ್ಮಯ್ಯ, ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪುಗೌಡ ಸೇರಿದಂತೆ ಮತ್ತಿತರರು ಭಾಗವಹಿಸುವರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ