Wednesday, November 18, 2026

ಪ್ರಾಯೋಗಿಕ ಆವೃತ್ತಿ

ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ – ಡಿ.ಕೆ.ಶಿವಕುಮಾರ್ : ಈ ಸಂದರ್ಭದಲ್ಲಿ ನೀಡಿದ ಸಂದೇಶವೇನು ?

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

“>

ಇತ್ತೀಚೆಗಷ್ಟೇ ಆರ್.ಎಸ್.ಎಸ್ ನ ಕುತಂತ್ರಿಗಳು ನನ್ನ ಹೆಸರಿನಲ್ಲಿ ನಕಲಿ ಪತ್ರ ತಯಾರಿಸಿ, ಡಿ.ಕೆ.ಶಿವಕುಮಾರ್ ತಮ್ಮ ಮಧ್ಯೆ ಅಸಮಾಧಾನವಿದೆ ಎಂದು ಬಿಂಬಿಸಲು ಯತ್ನಿಸಿದ್ದಾರೆ, ಅದಕ್ಕೆ ನಾಡಿನ ಜನತೆ ಕಿವಿಗೊಡಬಾರದು ಎಂದು ಸಿದ್ದರಾಮಯ್ಯ ತಿಳಿಸಿದ್ದರು. ಇದರ ಬೆನ್ನಲ್ಲೇ ಈ ಇಬ್ಬರು ನಾಯಕರು ಪೂಜೆ ಸಲ್ಲಿಸುವುದರೊಂದಿಗೆ ನಾವು ಒಟ್ಟಾಗಿಯೇ ಇದ್ದೇವೆ ಎಂಬ ಸಂದೇಶವನ್ನು ಜನತೆಗೆ ನೀಡಿದ್ದಾರೆ.

nudikarnataka.com

ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಪಕ್ಷ ಘೋಷಿಸಿರುವ ಗ್ಯಾರೆಂಟಿಗಳನ್ನು ಜಾರಿಗೆ ತರುವುದಾಗಿ ಪ್ರಮಾಣ ಮಾಡಿದ್ದೇವೆ. ಇತರರ ಅಪಪ್ರಚಾರಗಳಿಗೆ ಕಿವಿಗೊಡಬೇಡಿ, ನಾಡಿನ ಪ್ರತಿಯೊಬ್ಬರು ನಮ್ಮಲ್ಲಿ ಪೂರ್ಣ ವಿಶ್ವಾಸವಿಡಿ, ನಮ್ಮ ಗ್ಯಾರೆಂಟಿಗಳನ್ನು ನೂರಕ್ಕೆ ನೂರು ಜಾರಿ ಮಾಡುತ್ತೇವೆ ಎಂದು ನಾಡಿಗೆ ಭರವಸೆ ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ