Saturday, May 18, 2024

ಪ್ರಾಯೋಗಿಕ ಆವೃತ್ತಿ

ಮುಂದಿನ ಎರಡು ದಿನ ಮಳೆ ಸಾಧ್ಯತೆ| 7 ಜಿಲ್ಲೆಗಳಲ್ಲಿ”ಯೆಲ್ಲೋ ಅಲರ್ಟ್’​’

ರಾಜ್ಯದ ಕೆಲವೆಡೆ ಹಿಂಗಾರು ಚುರುಕುಗೊಂಡಿದ್ದು, ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಒಣಹವೆಯ ವಾತಾವರಣವಿತ್ತು. ನವೆಂಬರ್ 23 ಮತ್ತು 24- ಈ ಎರಡು ದಿನ ಬೆಂಗಳೂರಿನಲ್ಲಿ ಸುಮಾರು 30-35 ಮಿಲಿ ಮೀಟರ್ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಈ ಹಿನ್ನೆಲೆ, ಹವಾಮಾನ ಇಲಾಖೆ ಈ 7 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’​ ಘೋಷಿಸಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆಯಾಗಲಿದೆ. ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರದಿಂದಲೇ ಮೋಡಕವಿದ ವಾತಾವರಣವಿತ್ತು, ಬುಧವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!