Tuesday, November 24, 2026

ಪ್ರಾಯೋಗಿಕ ಆವೃತ್ತಿ

ಚಂದನ್ ಶೆಟ್ಟಿ – ನಿವೇದಿತ ಗೌಡ ದಾಂಪತ್ಯದಲ್ಲಿ ಬಿರುಕು: ವಿಚ್ಚೇದನಕ್ಕೆ ಮೊರೆ

ಕನ್ನಡದ ರ್‍ಯಾಪರ್ ಚಂದನ್ ಶೆಟ್ಟಿ ಹಾಗೂ ಕಿರುತೆರೆ ನಟಿ ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಇಬ್ಬರ ಪರಸ್ಪರ ಒಪ್ಪಿಗೆಯ ಮೇರೆಗೆ ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಬಿಗ್ ಬಾಸ್ ಶೋದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರೂ ಪ್ರೀತಿಸಿ, ನಂತರ ಪೋಷಕರ ಒಪ್ಪಿಗೆ ಪಡೆದು ಮದುವೆಯಾಗಿದ್ದರು.

ಕಳೆದ ನಾಲ್ಕು ವರ್ಷಗಳ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ಇಬ್ಬರೂ ಇಂದು ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ.

 

View this post on Instagram

 

A post shared by Niveditha Gowda 👑 (@niveditha__gowda)

“>

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರೂ ನಾಯಕ- ನಾಯಕಿಯಾಗಿ ಕ್ಯಾಂಡಿ ಕ್ರಷ್ ಎಂಬ ಚಿತ್ರದಲ್ಲಿ ನಟಿಸಿದ್ದು, ಶೇ.60 ಭಾಗ ಚಿತ್ರೀಕರಣ ಮುಗಿದಿದೆ ಎನ್ನಲಾಗಿದೆ. ಇವರಿಬ್ಬರೂ ರೀಲ್ಸ್ ಮೂಲಕ ಸಾಮಾಜಿಕ ಜಾಲತಾಣದಲ್ಲೂ ಸಕ್ರಿಯರಾಗಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ