Wednesday, September 11, 2024

ಪ್ರಾಯೋಗಿಕ ಆವೃತ್ತಿ

ಚಂದೂಪುರ ಡಿ.ಕೆ.ಗೌಡ ಪ್ರೌಢಶಾಲೆಯಲ್ಲಿ ಕೆಂಪೇಗೌಡ ಜಯಂತಿ

ಭಾರತೀನಗರದ ಚಂದೂಪುರದ ಡಿ.ಕೆ.ಗೌಡ ಪ್ರೌಢಶಾಲೆಯಲ್ಲಿ ನಿನ್ನೆ ನಾಡಪ್ರಭು ಕೆಂಪೇಗೌಡ ಜಯಂತಿ ಮತ್ತು ವೈದ್ಯರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಭಾರತೀನಗರದ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಮಾಯಪ್ಪನವರು ವಿದ್ಯಾರ್ಥಿಗಳಿಗೆ ವೈದ್ಯರ ದಿನದ ಮಹತ್ವವನ್ನು ಬಹಳ ಸರಳವಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ನಾಡಪ್ರಭು ಕೆಂಪೇಗೌಡರ ಇತಿಹಾಸ ಮತ್ತು ಅವರ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ, ಕೆಂಪೇಗೌಡರ “ಹೆಬ್ಬಾಗಿಲ” ಕಥೆಯನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯ ಶಿಕ್ಷಕರಾದ ಶಿವಮಾದೇಗೌಡರು ವಿದ್ಯಾರ್ಥಿಗಳಿಗೆ ಹಿತವಚನ ನೀಡುತ್ತಾ, ವಿದ್ಯಾರ್ಥಿ ಸಂಘದ ಮಹತ್ವದ ಬಗೆಗೆ ಸವಿವರವಾಗಿ ತಿಳಿಸಿದರು.

ಅರಕೆರೆ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಚನ್ನೇಗೌಡರವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಸುಮಧುರ ಕಂಠದಿಂದ ಹಾಡುಗಳನ್ನು ಹಾಡುವುದರ ಮೂಲಕ ಶಾಲೆಯ ವಿದ್ಯಾರ್ಥಿಗಳನ್ನು ರಂಜಿಸಿದರು.

ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ನಾಡಪ್ರಭು ಕೆಂಪೇಗೌಡ ಜಯಂತಿ ಮತ್ತು ವೈದ್ಯರ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಿದರು.

ಶಾಲೆಯ ವಿದ್ಯಾರ್ಥಿಗಳು ಚಂದೂಪುರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಕೆಂಪೇಗೌಡರ ಭಾವಚಿತ್ರ ಮತ್ತು ನಾಡಪ್ರಭು ಕೆಂಪೇಗೌಡರ ವೇಷಧರಿಸಿ ಮೆರವಣಿಗೆಯಲ್ಲಿ ಪ್ರದರ್ಶಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಲೆಯಲ್ಲಿ ವೈದ್ಯರ ಕುರಿತ  ಕಿರು ನಾಟಕವನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಪೋಷಕರ ಸಮಿತಿಯ ಅಧ್ಯಕ್ಷರಾದ ಪಿ.ಪಿ. ನಾಗೇಶ್ ರವರು, ಬಿ.ಎಚ್.ಪುಟ್ಟಸ್ವಾಮಿ, ಶಿಕ್ಷಕ ವೃಂದದಿಂದ ಪೂರ್ಣಿಮ, ಪ್ರತಿಭಾ, ಮಮತ, ವಿನುತ, ನಾಗರತ್ನ, ರಮ್ಯ,  ರಾಘವೇಂದ್ರ, ಶಿವಕುಮಾರ್, ಶಶಿಕುಮಾರ್, ಪ್ರಕಾಶ್, ಸ್ವಾಮಿ  ಮತ್ತು ಬೋಧಕರೇತರರು ಸೇರಿದಂತೆ ಮತ್ತಿತ್ತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!